ಹಂಡೇಲು ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭ

New Project (49)
Published on

ಮೂಡುಬಿದಿರೆ: ಪುತ್ತಿಗೆ ಗ್ರಾಮದ ಹಂಡೇಲು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆಂಗ್ಲ ಮಾಧ್ಯಮ ತರಗತಿ ಆರಂಭಗೊಂಡಿತು. ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.

ತಾಪಂ ಮಾಜಿ ಸದಸ್ಯ ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿ, ಆರು ಮತ್ತು ಏಳನೇ ತರಗತಿ ಕಳೆದ ಹಲವು ವರ್ಷಗಳಿಂದ ಆಂಗ್ಲ ಮಾಧ್ಯಮದಲ್ಲಿ ನಡೆಯುತ್ತಿದೆ. ಪ್ರಸ್ತುತ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಅನುವು ಮಾಡಿಕೊಟ್ಟಿರುವುದಕ್ಕೆ ಸರ್ಕಾರಕ್ಕೆ ಕೃತಜ್ಞತೆಗಳು. ಸಮಾನ ಶಿಕ್ಷಣ ವ್ಯವಸ್ಥೆ ಈ ರೀತಿಯಲ್ಲಿ ಜಾರಿಗೆ ಬರುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪುತ್ತಿಗೆ ಗ್ರಾಪಂ ಸದಸ್ಯ ಮುರುಳೀಧರ ಮಾತನಾಡಿ, ಪಂಚಾಯಿತಿ ಹಾಗೂ ದಾನಿಗಳ ನೆರವಿನೊಂದಿಗೆ ಶಾಲೆ ಅಭಿವೃದ್ಧಿ ಮಾಡಲಾಗುವುದು. ಗೌರವ ಶಿಕ್ಷಕರಿಗೆ ಸಂಬಳ ಕೂಡ ಹಳೇ ವಿದ್ಯಾರ್ಥಿಗಳು ಸಂಗ್ರಹಿಸಿ ನೀಡಿದ್ದಾರೆ ಎಂದರು.

ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಶಾಲಾ ಪರಿಕರ ವಿತರಿಸಲಾಯಿತು. ಮಾಜಿ ಉಪಾಧ್ಯಕ್ಷ ಫಿರೋಜ್ ಖಾನ್, ಥೈರಾ ಬಾನು, ಪ್ರತಿಭಾ, ಖಜಾಂಚಿ ಜಯಂತಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಹೇಶ್ವರಿ, ಶಿಕ್ಷಣ ಸಂಯೋಜಕ ರಾಜೇಶ್ ಭಟ್, ಆಂಗ್ಲ ಮಾಧ್ಯಮದ ಗೌರವ ಶಿಕ್ಷಕಿ ಮೋಕ್ಷ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಚಂದ್ರಕಾಂತಿ ಸ್ವಾಗತಿಸಿದರು. ಶಿಕ್ಷಕ ದೊರೆಸ್ವಾಮಿ ನಿರೂಪಿಸಿದರು. ಶಿಕ್ಷಕಿ ಚಿತ್ರಾವತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net