

ತುಮಕೂರು: ಪ್ರಥಮ ಪಿಯುಸಿ ಆಂಗ್ಲ ಭಾಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿಗಳು ಕೇಳಿಬಂದ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಕರು ಪರೀಕ್ಷೆ ಮುಂದೂಡಿ ಆದೇಶ ನೀಡಿದ್ದಾರೆ
ಜಿಲ್ಲೆಯಲ್ಲಿ ನಿನ್ನೆಯಿಂದ ಪ್ರಥಮ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು ಇಂದಿನ ಆಂಗ್ಲ ಭಾಷೆ ಪರೀಕ್ಷೆಯನ್ನು ಮಾ.6 ಕ್ಕೆ ಮುಂದೂಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಾಟ್ಸ್‌ಗಳಲ್ಲಿ ಹರಿದಾಡುತ್ತಿದೆಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಪ್ರಕರಣದ ಬಗ್ಗೆ ತನಿಖೆಗೆ ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ತ್ರಿ ಸದಸ್ಯರ ಕಮಿಟಿ ರಚನೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಬಗ್ಗೆ ಸೈಬರ್ ಠಾಣೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ದೂರು ನೀಡಲಿದೆ.