ಇ-ಆಡಳಿತದ ಮೂಲಕ ನಾಗರಿಕ ಸೇವೆಗಳ ಹೆಚ್ಚಳ: ಪ್ರಿಯಾಂಕ್ ಖರ್ಗೆ|E-Governance

blank

ಬೆಂಗಳೂರು: ರಾಜ್ಯದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ಇ-ಆಡಳಿತ ಪರಿಹಾರಗಳನ್ನು ರೂಪಿಸಲು ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್(ಎನ್‌ಐಎಸ್‌ಜಿ) ಸಂಸ್ಥೆಯ ಡಿಜಿಟಲ್ ತಂತ್ರಜ್ಞಾನ ನೆರವಾಗಲಿದೆ(Enhancing Civil Services through e-Governance) ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ತಿಳಿಸಿದರು.

ಎನ್‌ಐಎಸ್‌ಜಿಯ ಡಿಜಿಟಲ್ ಪರಿಣತಿಯೊಂದಿಗೆ ರಾಜ್ಯದ ಇ-ಆಡಳಿತದಲ್ಲಿ ಮಹತ್ವದ ಬೆಳವಣಿಗೆ ರೂಪಿಸುವ ಸಲುವಾಗಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಎನ್‌ಐಎಸ್‌ಜಿ ತಂತ್ರಜ್ಞಾನ ಸಾರ್ವಜನಿಕ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ. ಸೇವಾ ವಿತರಣಾ ದಕ್ಷತೆಯನ್ನು ಸುಧಾರಿಸಿ, ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಎಐ-ಚಾಲಿತ ಆಡಳಿತ ಮಾದರಿಗಳನ್ನು ಸಂಯೋಜಿಸುವಲ್ಲಿ ನೆರವಾಗಲಿದೆ ಎಂದು ಹೇಳಿದರು.

ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ಆಡಳಿತದಲ್ಲಿ ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳುವುದರಿಂದ ಇ-ಆಡಳಿತದಲ್ಲಿ ಮಹತ್ವದ ಬದಲಾವಣೆಯನ್ನು ತರಬಹುದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಎನ್‌ಐಎಸ್‌ಜಿ ಜೊತೆ ಸಹಯೋಗಕ್ಕೆ ಮುಂದಾಗಿದೆ. ಇದರಿಂದ ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಪರಿಣಾಮಕಾರಿಯಾಗಲಿವೆ ಎಂದು ತಿಳಿಸಿದರು.

ಆಡಳಿತದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿ ಭವಿಷ್ಯದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗುವುದರೊಂದಿಗೆ ಇತರ ರಾಜ್ಯಗಳಿಗೆ ಮಾದರಿಯಾಗಬಲ್ಲದು ಎಂದು ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಎನ್‌ಐಎಸ್‌ಜಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವ್ ಬನ್ಸಾಲ್ ಮಾತನಾಡಿ, ನವೀನ ಡಿಜಿಟಲ್ ತಂತ್ರಜ್ಞಾನಗಳನ್ನು ರೂಪಿಸುವ ಮೂಲಕ ಕರ್ನಾಟಕದ ಇ-ಆಡಳಿತದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಎನ್‌ಐಎಸ್‌ಜಿ ಬದ್ಧವಾಗಿದೆ ಎಂದರು.

ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವುದು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಲಪಡಿಸುವುದು ಮತ್ತು ವಾಯುಯಾನ ಕ್ಷೇತ್ರ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳನ್ನು ಅನ್ವೇಷಿಸುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಿ ಕರ್ನಾಟಕದಲ್ಲಿ ಸುಧಾರಿತ ಇ-ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತೇವೆ ಎಂದು ತಿಳಿಸಿದರು.
ಸಿಎ್ಒ ವೀರಾಜು ನಾಯ್ಡು, ಎನ್‌ಐಎಸ್‌ಜಿ ಯೋಜನಾ ಅಧಿಕಾರಿ ಸ್ಟೀನ್ ಅನುರಾಗ್ ಪ್ರಾಥಿಪತಿ ಉಪಸ್ಥಿತರಿದ್ದರು.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…