More

    ಕ್ರೀಡೆಯಿಂದ ಮನುಷ್ಯನ ಉತ್ಸಾಹ ವೃದ್ಧಿ : ಶಾಸಕ ಶಿವಾನಂದ ಪಾಟೀಲ ಹೇಳಿಕೆ

    ಬಸವನಬಾಗೇವಾಡಿ: ಜಗತ್ತಿನ ಯಾವುದೇ ಕ್ರೀಡೆಗಳಿಗೆ ಮತ, ಪಥ, ಜಾತಿ ಭೇದವಿಲ್ಲ. ಕ್ರೀಡೆಯಿಂದ ಆರೋಗ್ಯವೃದ್ಧಿಯಾಗುತ್ತದೆ ಎಂದು ಮಾಜಿ ಸಚಿವ ಶಾಸಕ ಶಿವಾನಂದ ಪಾಟೀಲ ಹೇಳಿದರು.

    ಪಟ್ಟಣದ ವಿಜಯಪುರ ರಸ್ತೆಯ ಬಸವೇಶ್ವರ ಸರ್ಕಾರಿ ಪಪೂ ಕಾಲೇಜ್‌ನಲ್ಲಿ ಸ್ವಾತಂತ್ರೃದ ಅಮೃತ ಮಹೋತ್ಸವ ನಿಮಿತ್ತ ಕಂದಾಯ ಇಲಾಖೆ ವಿವಿಧ ಇಲಾಖೆ ಸರ್ಕಾರಿ ನೌಕರರಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

    ಕ್ರೀಡೆ ಮನುಷ್ಯನ ಉತ್ಸಾಹ ಹೆಚ್ಚಿಸುತ್ತದೆ. ನೌಕರರು ತಮ್ಮ ಕೆಲಸ ಕಾರ್ಯಗಳ ನಡುವೆ ಇಂತಹ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾಸಕ್ತಿ ಪ್ರದರ್ಶಿಸಬೇಕು ಎಂದರು.
    ತಹಸೀಲ್ದಾರ್ ವಿಜಯಕುಮಾರ ಕಡಕೋಳ ಮಾತನಾಡಿ, ಇಂತಹ ಕ್ರೀಡಾಕೂಟಗಳಿಂದ ವಿವಿಧ ಇಲಾಖೆಗಳ ನೌಕರರ ಪರಿಚಯವಾಗಿ ಪರಸ್ಪರರು ಸ್ನೇಹಭಾವ ಬೆಳೆಸಿಕೊಳ್ಳಲು ಸಾಧ್ಯ. ನೌಕರರಲ್ಲಿ ಕ್ರೀಡಾಸಕ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಹೇಳಿದರು.

    ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಅಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಂಗಮೇಶ ಪೂಜಾರಿ, ಪುರಸಭೆ ಮುಖ್ಯಾಧಿಕಾರಿ ಬಸವರಾಜ ಹಿರೇಮಠ, ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ ಕೌಲಗಿ, ಎ.ಡಿ.ಎಲ್.ಆರ್.ಮುರಗೇಶ ರೂಢಗಿ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಜಿ.ವೈ.ನಾಗರಾಳ, ಅಭಿವೃದ್ಧಿ ಅಧಿಕಾರಿ ಬಿ.ಎಸ್.ಬಡಿಗೇರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ಎಸ್.ಪಾಟೀಲ ಇತರರಿದ್ದರು.

    ಪ್ರತಿ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಬಹುಮಾನ ನೀಡಲಾಯಿತು. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪುರಸಭೆ ನ್ಯಾಯಾಂಗ ಇಲಾಖೆ ಸಿಬ್ಬಂದಿ ಪಂದ್ಯಗಳಲ್ಲಿ ಭಾಗವಹಿಸಿದ್ದರು.

    ರಾಜಶೇಖರ ಚಿಂಚೋಳಿ ಸ್ವಾಗತಿಸಿದರು. ಶಿವು ಮಡಿಕೇಶ್ವರ ನಿರೂಪಿಸಿದರು. ಮಹೇಶ ಬಳಗಾನೂರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts