More

  ದಾರಿತಪ್ಪಿಸುವ ಜಾಹೀರಾತು: ಬಾಬಾ ರಾಮದೇವ್‌ ಖುದ್ದು ಹಾಜರಿಗೆ ಸುಪ್ರೀಂಕೋರ್ಟ್​ ಆದೇಶ​!

  ನವದೆಹಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮದೇವ್​ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಖುದ್ದಾಗಿ ಕೋರ್ಟ್​ಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.

  ಇದನ್ನೂ ಓದಿ: ತೆಲಂಗಾಣ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ: ಜೊತೆಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಜವಾಬ್ದಾರಿ

  ರಕ್ತದೊತ್ತಡ, ಮಧುಮೇಹ, ಸಂಧಿವಾತ, ಅಸ್ತಮಾ ಮತ್ತು ಬೊಜ್ಜು ಮುಂತಾದ ಕಾಯಿಲೆಗಳ ಚಿಕಿತ್ಸೆಗೆ ಸಂಬಂಧ ಪತಂಜಲಿ ಆಯುರ್ವೇದ ಉತ್ಪನ್ನಗಳ ಕುರಿತು ಸುಳ್ಳು ಮತ್ತು ತಪ್ಪು ದಾರಿಗೆಳೆಯುವ ಜಾಹೀರಾತನ್ನು ನೀಡುತ್ತಿದ್ದರೂ ಕೇಂದ್ರ ಸರ್ಕಾರ ನಿಷ್ಕ್ರಿಯೆವಾಗಿದೆ ಎಂದು ಸುಪ್ರೀಂ ಕೋರ್ಟ್​ ಈ ಹಿಂದೆ ತರಾಟೆಗೆ ತೆಗೆದುಕೊಂಡಿತ್ತು.

  ಪತಂಜಲಿ ಆಯುರ್ವೇದ ತಪ್ಪುದಾರಿಗೆಳೆಯುವ ಜಾಹೀರಾತುಗಳ ಪ್ರಸಾರದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ ಅರ್ಜಿಯ ನಂತರ ನೋಟಿಸ್ ನೀಡಲಾಗಿದೆ. ಅಲ್ಲದೆ ಸುಪ್ರೀಂ ಕೋರ್ಟ್​ ತಮ್ಮ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಪ್ರಾರಂಭಿಸಬಾರದು ಎಂದು ಕೇಳಿ ಪತಂಜಲಿಗೆ ನೋಟಿಸ್ ನೀಡಿತ್ತು.

  ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳಿಗೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತ್ತು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ್ದಕ್ಕಾಗಿ ಅದರ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತು. ಯಾವುದೇ ಪ್ರಾಯೋಗಿಕ ಪುರಾವೆಗಳಿಲ್ಲದಿದ್ದರೂ ಪತಂಜಲಿ ಔಷಧಿಗಳು ಕೆಲವು ಕಾಯಿಲೆಗಳನ್ನು ಗುಣಪಡಿಸುತ್ತವೆ ಎಂದು ಸುಳ್ಳು ಹೇಳಿಕೆ ನೀಡುವ ಮೂಲಕ ದೇಶವನ್ನು ದಾರಿ ತಪ್ಪಿಸುತ್ತಿದೆ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು.

  ಕೋಚಿಂಗ್​ಗೆ ಹೊರಟಿದ್ದ ವಿದ್ಯಾರ್ಥಿನಿಗೆ ಕಾದಿತ್ತು ಶಾಕ್​: ಮಗಳ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ ತಂದೆ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts