More

    ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

    ಕೆ.ಆರ್.ನಗರ: ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸಾರ್ವಜನಿಕರು ಕೈ ಜೋಡಿಸಬೇಕೆಂದು ಪುರಸಭಾ ಮಾಜಿ ಸದಸ್ಯ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ಎಸ್.ಯೋಗಾನಂದ ಹೇಳಿದರು.

    ಪಟ್ಟಣದ ಆಂಜನೇಯ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಖಾಸಗಿ ಶಾಲೆಗಳ ವ್ಯಾಮೋಹದ ನಡುವೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

    ಉಚಿತ ಶಿಕ್ಷಣ, ಬಿಸಿಯೂಟದ ವ್ಯವಸ್ಥೆ, ಉಚಿತ ಪಠ್ಯಪುಸ್ತಕ ವಿತರಣೆ, ಶಾಲಾ ಸಮವಸ್ತ್ರ, ಉಚಿತ ಬೈಸಿಕಲ್, ಪೌಷ್ಠಕಾಂಶ ಭರಿತ ಹಾಲು, ರಾಗಿಮಾಲ್ಟ್ ಸೇರಿದಂತೆ ಇನ್ನಿತರ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಸಿಗಲಿವೆ. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕೆಂದು ಮನವಿ ಮಾಡಿದರು.

    ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನರಸಿಂಹರಾಜು ಮಾತನಾಡಿ, ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಸಹಕಾರದಿಂದ ಶಾಲೆಯನ್ನು ಉನ್ನತ ಹಂತಕ್ಕೆ ತೆಗೆದುಕೊಂಡು ಹೋಗಲು ಶ್ರಮಿಸಲಾಗುವುದು ಎಂದು ಹೇಳಿದರು.

    ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಸ್ಪಿನ್‌ಕೃಷ್ಣ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

    ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಎಸ್‌ಡಿಎಂಸಿ ಅಧ್ಯಕ್ಷೆ ಸುನೀತಾ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗಣಪತಿ ರವಿ, ಖಜಾಂಚಿ ಶಿಲ್ಪಾ ಶ್ರೀನಿವಾಸ್, ನಿರ್ದೇಶಕ ಪುಟ್ಟಸ್ವಾಮಿ, ಶಿವಕುಮಾರ್, ಇಂದ್ರಾಣಿ, ಬೇಬಿ, ಸಹಶಿಕ್ಷಕ ರಂಗಪ್ಪ, ನಾಗರತ್ನ್ನಾ, ಕವಿತಾ, ಪುರಸಭಾ ನಿವೃತ್ತ ನೌಕರ ಮಂಜಣ್ಣ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts