More

    ಧೈರ್ಯವಾಗಿ ಸರ್ಕಾರಿ ಶಾಲೆಗೆ ಮಕ್ಕಳ ದಾಖಲಿಸಿ

    ರಿಪ್ಪನ್‌ಪೇಟೆ: ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದೇವೆ. ಪಾಲಕರು ತಮ್ಮ ಮಕ್ಕಳನ್ನು ಧೈರ್ಯವಾಗಿ ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

    ಶುಕ್ರವಾರ ಗವಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಹಾಗೂ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳು ಹಳೆಯ ಕಟ್ಟಡದಲ್ಲಿಯೇ ನಡೆಯುತ್ತಿವೆ ಎಂದು ಕೆಲವು ಪಾಲಕರು ತತ್ಸಾರ ಮಾಡಬೇಡಿ ಎಂದರು.
    ಪತಿ-ಪತ್ನಿಯರು ದುಡಿಮೆಯಿಂದ ಒಂದಷ್ಟು ಆರ್ಥಿಕವಾಗಿ ಉತ್ತಮವಾಗಿರುವ ಕಾರಣ ಖಾಸಗಿ ಶಾಲೆಯಲ್ಲಿ ದುಬಾರಿ ಶುಲ್ಕವಾದರೂ ಮಕ್ಕಳನ್ನು ಸೇರಿಸಲು ಆಸಕ್ತಿ ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರು, ಶಿಕ್ಷಣ ವ್ಯವಸ್ಥೆಗೆ ಬೇಕಿರುವ ಉತ್ತಮ ಸಾಮರ್ಥ್ಯ ಹೊಂದಿರುತ್ತಾರೆ. ಸರ್ಕಾರ ಇಂತಹವರನ್ನೇ ಆಯ್ಕೆ ಮಾಡಿಕೊಳ್ಳುತ್ತದೆ. ಖಾಸಗಿ ಶಾಲೆಗಳಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರ ಗುಣಮಟ್ಟದಷ್ಟು ಸಾಮರ್ಥ್ಯ ಹೊಂದಿರುವುದಿಲ್ಲ. ಇದನ್ನು ಪಾಲಕರು ಅರಿತುಕೊಳ್ಳಬೇಕು ಎಂದು ಹೇಳಿದರು.
    ಶಿವಮೊಗ್ಗ ಜಿಲ್ಲೆಯಲ್ಲಿಯೇ ಹೊಸನಗರ ಉತ್ತಮ ಫಲಿತಾಂಶ ಬಂದಿದೆ ಎಂದರೆ ಇಲ್ಲಿಯ ಶಿಕ್ಷಕರ ಸಾಧನೆಯೂ ಸೇರಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ನುರಿತ ಶಿಕ್ಷಕರಿಂದ ಬೋಧನೆ, ಕ್ರೀಡೆ, ಸಾಂಸ್ಕೃತಿಕ ಇನ್ನಿತರ ಸಾಮಾಜಿಕ ಚಟುವಟಿಕೆಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಲು ವಿದ್ಯಾರ್ಥಿಗಳನ್ನು ಅಣಿಗೊಳಿಸಲಾಗುತ್ತದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಬಿಸಿಯೂಟದ ಜತೆಗೆ ಪೌಷ್ಟಿಕ ಆಹಾರಗಳನ್ನು ಒದಗಿಸುತ್ತಿದೆ. ಮೂಲ ಸೌಕರ್ಯದ ಜತೆಗೆ ನೂತನ ಕಟ್ಟಡಗಳನ್ನು ಮಂಜೂರು ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಇನಷ್ಟು ಸುಂದರಗೊಳಿಸಲು ಸರ್ಕಾರ ಯೋಜನೆ ರೂಪಿಸಿದೆ. ಇಷ್ಟೆಲ್ಲ ಸವಲತ್ತುಗಳನ್ನು ಕೊಟ್ಟಿದ್ದರೂ ಪಾಲಕರಿಗೆ ಖಾಸಗಿ ಶಾಲೆಯ ಅಪೇಕ್ಷೆ ಏಕೆ? ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಜತೆಗೆ ಸಮಾಜದ ಅಭಿವೃದ್ಧಿಗೆ ಕೈಜೋಡಿಸಿ ಎಂದರು.
    ಎಸ್‌ಡಿಎಂಸಿ ಅಧ್ಯಕ್ಷ ಸೀತಾರಾಮ, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಸದಸ್ಯರಾದ ಜಿ.ಡಿ.ಮಲ್ಲಿಕಾರ್ಜುನ, ಗಣಪತಿ, ಮಂಜುಳಾ, ಸಾಯಿರಾಬಿ, ಆಸೀಫ್, ವೇದಾವತಿ, ಪ್ರಕಾಶ್ ಪಾಲೇಕರ್, ನಿರೂಪ, ದಾನಮ್, ಮಹಾಲಕ್ಷ್ಮೀ, ವನಮಾಲಾ, ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts