ಎನ್.ಆರ್.ಪುರ: ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಜೂ.5ರವರೆಗೆ ದಾಖಲಾತಿ ಆಂದೋಲನ ಜಾಥಾ ನಡೆಯಲಿದೆ ಎಂದು ಬಿಇಒ ಕೆ.ಆರ್.ಪುಷ್ಪಾ ತಿಳಿಸಿದರು.
ಶುಕ್ರವಾರ ಕರ್ನಾಟಕ ಪಬ್ಲಿಕ್ ಸ್ಕೂಲಿನ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿ ಮಾತನಾಡಿ, ತಾಲೂಕಿನಲ್ಲಿ 78 ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ 8 ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರಾರಂಭೋತ್ಸವ ನಡೆಸಿ ಮಕ್ಕಳಿಗೆ ಸಿಹಿ ಊಟ ಬಡಿಸಿ, ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಲಾಗುತ್ತಿದೆ ಎಂದರು.
ಕೆಪಿಎಸ್ ಆವರಣದಿಂದ ಬಸ್ ನಿಲ್ದಾಣದವರೆಗೆ ದಾಖಲಾತಿ ಆಂದೋಲನ ಜಾಥಾ ನಡೆಯಿತು. ಕೆಪಿಎಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಕೆಪಿಎಸ್ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮಣ್ ಶೆಟ್ಟಿ, ಉಪಾಧ್ಯಕ್ಷ ಜಿ.ಪುರುಷೋತ್ತಮ್, ಸದಸ್ಯರಾದ ಅರುಣ ಜೈನ್, ಶಕುಂತಲಾ, ಮೇಘನಾ, ಉದಯ, ಸಲೀಂ, ತಹಸೀಲ್ದಾರ್ ರಮೇಶ್, ಪಪಂ ಸದಸ್ಯರಾದ ಜುಬೇದಾ, ಸೈಯದ್‌ವಸೀಂ, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಡಾ. ವಿಜಯಕುಮಾರ್, ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಎಂ.ಪಿ.ಮನು, ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ಸೇವ್ಯಾನಾಯಕ್, ಧನಂಜಯ ಮೇಧೂರು, ರಾಮನಾಯ್ಕ ಇತರರಿದ್ದರು.