More

    ಆದಿವಾಸಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಿ

    ಎಚ್.ಡಿ.ಕೋಟೆ: ಅಂಗನವಾಡಿ ಕಾರ್ಯಕರ್ತರು ಹಾಗೂ ಕಂದಾಯ ಇಲಾಖೆ ನೌಕರರು ಆದಿವಾಸಿಗಳಿಗೆ ಸರ್ಕಾರದ ಸೌಲಭ್ಯಗಳು ದೊರಕುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಹಸೀಲ್ದಾರ್ ಶ್ರೀನಿವಾಸ್ ಸೂಚಿಸಿದರು.

    ತಾಲೂಕಿನ ಬಸವನಗಿರಿ ಹಾಡಿಯ ಆಶ್ರಮ ಶಾಲೆಯಲ್ಲಿ ಗುರುವಾರ ಪ್ರಧಾನ ಮಂತ್ರಿ ಜನ್‌ಮನ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಆದಿವಾಸಿಗಳಿಗೆ ದಾಖಲಾತಿ ಆಂದೋಲನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಹಾಡಿ ಜನರಿಗೆ ಆಧಾರ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ನೀಡಲು ಶಿಬಿರ ಆಯೋಜಿಸಲಾಗಿದ್ದು, ಈ ದಾಖಲೆಗಳು ಇಲ್ಲದವರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಎಸ್‌ಬಿಐ ಬ್ಯಾಂಕ್ ವತಿಯಿಂದ ಖಾತೆ ಹೊಂದದೆ ಇರುವವರಿಗೆ ಖಾತೆಯನ್ನು ಕೂಡ ಮಾಡಿಸಲಾಗುತ್ತಿದೆ ಎಂದು ತಿಳಿಸಿದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಇಲಾಖೆಯಿಂದ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು, ರಕ್ತಹೀನತೆ ಪರೀಕ್ಷೆ, ಕ್ಷಯ ರೋಗ ಪರೀಕ್ಷೆ ಸೇರಿದಂತೆ ಹಾಡಿ ಜನರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಸಣ್ಣ ರಾಮಪ್ಪ, ಬ್ಯಾಂಕ್ ಮ್ಯಾನೇಜರ್ ಬಾನು ಪ್ರಕಾಶ್, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಬ್ಯಾಂಕ್ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts