More

    ಫಸಲ್ ಬಿಮಾ ಯೋಜನೆಗೆ ನೋದಾಯಿಸಲು ಅವಕಾಶ

    ಧಾರವಾಡ: ರಾಜ್ಯ ಸರ್ಕಾರವು 2023- 24ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ೮ ತಾಲೂಕಿನ ೧೪ ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿದೆ.
    ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಧಿಸೂಚಿತ ಬೆಳೆಗಳಾದ ಕಡಲೆ (ಮಳೆ ಆಶ್ರಿತ) ಮತ್ತು ಜೋಳ (ಮಳೆ ಆಶ್ರಿತ) ಬೆಳೆಗಳಿಗೆ ಡಿ. ೧ರೊಳಗೆ ನೋಂದಾಯಿಸಿಕೊಳ್ಳಬೇಕು. ಹೋಬಳಿ ಮಟ್ಟಕ್ಕೆ ಅಽಸೂಚಿತ ಬೆಳೆಗಳಾದ ಹುರುಳಿ (ಮಳೆ ಆಶ್ರಿತ), ಕುಸುಬೆ (ಮಳೆ ಆಶ್ರಿತ), ಸೂರ್ಯಕಾಂತಿ (ಮಳೆ ಆಶ್ರಿತ), ಸೂರ್ಯಕಾಂತಿ (ನೀರಾವರಿ) ಬೆಳೆಗಳಿಗೆ ನ. 15ರೊಳಗೆ, ಕಡಲೆ (ಮಳೆ ಆಶ್ರಿತ), ಹೆಸರು (ಮಳೆ ಆಶ್ರಿತ), ಜೋಳ (ನೀರಾವರಿ), ಮುಸುಕಿನ ಜೋಳ (ನೀರಾವರಿ), ಹಾಗೂ ಗೋಽ (ಮಳೆ ಆಶ್ರಿತ) ಬೆಳೆಗಳಿಗೆ ಡಿ. 1ರೊಳಗೆ ನೋಂದಾಯಿಸಿಕೊಳ್ಳಬೇಕು.
    ಗೋಧಿ (ನೀರಾವರಿ) ಬೆಳೆಗೆ ಡಿ. 15 ಮತ್ತು ಕಡಲೆ (ನೀರಾವರಿ) ಬೆಳೆಗೆ ಡಿ. 30 ಕೊನೆಯ ದಿನ. ಬೇಸಿಗೆ ಹಂಗಾಮಿಗೆ ಹೋಬಳಿ ಮಟ್ಟಕ್ಕೆ ಅಧಿಸೂಚಿತವಾದ ನೆಲಗಡಲೆ (ಶೇಂಗಾ) ನೀರಾವರಿ ಬೆಳೆಗೆ ನೋಂದಾಯಿಸಲು ಫೆ. 28 ಕೊನೆಯ ದಿನವಾಗಿದೆ. ಮಾಹಿತಿಗೆ ಎಸ್‌ಬಿಐ ಜನರಲ್ ಇನ್ಶುರೆನ್ಸ್ ಕಂಪನಿ, 2ನೇ ಮಹಡಿ, ಕಲಬುರ್ಗಿ ಹಾಲ್‌ಮಾರ್ಕ, ಪಿಂಟೋ ರೋಡ್, ದೇಸಾಯಿ ಕ್ರಾಸ್, ದೇಶಪಾಂಡೆ ನಗರ, ಹುಬ್ಬಳ್ಳಿ ಅಥವಾ ಜಿಲ್ಲಾ ವ್ಯವಸ್ಥಾಪಕ ಉಮೇಶ ಕಾಂತಿ ಅಥವಾ ಸಮೀಪದ ಉಪ ಕೃಷಿ ನಿರ್ದೇಶಕರ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ ಅಥವಾ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಬೇಕು ಎಂದು ಜಂಟಿ ನಿರ್ದೇಶಕ ಡಾ. ಕಿರಣಕುಮಾರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts