More

    ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾ

    ರಾಯಚೂರು: ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗಿದ್ದು, ಬರ ಕಾಮಗಾರಿಗಳನ್ನು ತ್ವರಿತವಾಗಿ ನಿರ್ವಹಿಸಲು ಅಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
    ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಬರ ಕಾಮಗಾರಿ ನಿರ್ವಹಣೆಗೆ ಪ್ರತಿ ತಾಲೂಕಿಗೆ 50 ಲಕ್ಷ ರೂ.ಗಳನ್ನು ಮೊದಲ ಕಂತಾಗಿ ಬಿಡುಗಡೆ ಮಾಡಲಾಗಿದೆ ಎಂದರು.
    ನಾರಾಯಣಪುರ ಜಲಾಶಯದಿಂದ 0.5 ಟಿಎಂಸಿ ನೀರು ಹರಿಸಲಾಗುತ್ತಿದೆ. ಮುರ‌್ನಾಲ್ಕು ದಿನಗಳಲ್ಲಿ ಗೂಗಲ್ ಜಲಾಶಯಕ್ಕೆ ನೀರು ತಲುಪಲಿದೆ. ಇನ್ನೂ ಒಂದು ತಿಂಗಳ ಕಾಲ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ.
    ಪ್ರತಿ ತಾಲೂಕಿನಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ತಾಲೂಕು ಟಾಸ್ಕ್ ೆರ್ಸ್ ಸಮಿತಿ ರಚನೆ ಮಾಡಲಾಗಿದೆ. ಪ್ರತಿ ಶನಿವಾರ ಸಭೆ ನಡೆಸಿ ಸೋಮವಾರ ವರದಿ ನೀಡಲಾಗುತ್ತಿದೆ. ಸಮಿತಿ ವರದಿ ಆಧರಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.
    ಕೃಷ್ಣಾ ನದಿಯಿಂದ ಆರ್‌ಟಿಪಿಎಸ್, ವೈಟಿಪಿಎಸ್‌ಗಾಗಿ ಪ್ರತ್ಯೇಕವಾಗಿ ನೀರು ಹರಿಸಲಾಗುತ್ತಿದೆ. ನಾರಾಯಣಪುರ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆಗಾಗಿ 3 ಟಿಎಂಸಿ ನೀರು ಕಾಯ್ದಿರಿಸಲಾಗಿತ್ತು. ನದಿಗೆ ನೀರು ಹರಿಸಿದಾಗ ನೀರು ವಿದ್ಯುತ್ ಘಟಕಗಳಿಗೆ ತಲುಪದೇ ಇರುವುದರಿಂದ ನೇರವಾಗಿ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಚಂದ್ರಶೇಖರ ನಾಯಕ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts