More

    ದರ್ಶನ್ ಬಗ್ಗೆ ಅಭಿಮಾನಿಗಳು ಕೇಳಿದ ಪ್ರಶ್ನೆಗಳಿಗೆ ಈ ರೀತಿ ಉತ್ತರಿಸಿದ ಸುದೀಪ್

    ಬೆಂಗಳೂರು: ಕಿಚ್ಚ ಸುದೀಪ್ ಪ್ರಸ್ತುತ ‘ಮ್ಯಾಕ್ಸ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಹಾಗೆಯೇ ನಿನ್ನೆಯಷ್ಟೇ ಬಿಗ್‌ಬಾಸ್ ಕನ್ನಡ ಸೀಸನ್ 10 ಶೋ ಮುಗಿಸಿರುವ ಸುದೀಪ್ ಸ್ವಲ್ಪ ರಿಲ್ಯಾಕ್ಸ್ ಮೂಡ್​​​ನಲ್ಲಿದ್ದಾರೆ. ಅಂದಹಾಗೆ ಸುದೀಪ್ ಟ್ವಿಟ್ಟರ್‌ನಲ್ಲಿ AskKichcha ಸೆಷನ್ ನಡೆಸಿದ್ದಾರೆ. ಈ ವೇಳೆ ಫ್ಯಾನ್ಸ್​​​ ಕೇಳಿರುವ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದು, ದರ್ಶನ್ ಬಗ್ಗೆ ಅಭಿಮಾನಿಗಳು ಕೇಳಿದ ಪ್ರಶ್ನೆಗಳಿಗೂ ಸುದೀಪ್ ಉತ್ತರಿಸಿದ್ದಾರೆ.

    ಅಭಿಮಾನಿಯೊಬ್ಬರು ಸರ್, “ನಿಮ್ಮ ಹಾಗೂ ದರ್ಶನ್ ಅವರ ನಡುವಿನ ಸಮಸ್ಯೆ ಯಾವಾಗ ಬಗೆಹರಿಸಿಕೊಳ್ಳುತ್ತೀರಾ? ಇನ್ನು ಎಷ್ಟು ಸಮಯ ತಗೋತ್ತೀರಾ?” ಎಂದು ಕೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್, “ಸಮಸ್ಯೆ ಏನು ಅಂತ ಇಬ್ಬರೂ ಹುಡುಕುತ್ತಾ ಇದ್ದೀವಿ” ಎಂದು ನಗುವ ಎಮೋಜಿ ಪೋಸ್ಟ್ ಮಾಡಿದ್ದಾರೆ.
    ಮತ್ತೋರ್ವ ಅಭಿಮಾನಿ “ದರ್ಶನ್ ಬಗ್ಗೆ ಒಂದು ಪದದಲ್ಲಿ ಹೇಳಿ” ಎಂದು ಕೇಳಿದ್ದಾರೆ. ಅದಕ್ಕೆ ಸುದೀಪ್ “ಆತನಿಗೆ ಸದಾ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ” ಎಂದು ಬರೆದಿದ್ದಾರೆ.

    ಎಲ್ಲರಿಗೂ ಗೊತ್ತಿರುವ ಹಾಗೆ ಒಂದು ಕಾಲದಲ್ಲಿ ದರ್ಶನ್ ಹಾಗೂ ಸುದೀಪ್ ಬಹಳ ಆತ್ಮೀಯ ಸ್ನೇಹಿತರು. ಅವರಿಬ್ಬರೂ ಈಗಲೂ ಹೀಗೆ ಒಟ್ಟಿಗೆ ಇರಲಿ ಎಂಬುದೇ ಅಭಿಮಾನಿಗಳ ಆಶಯ. ಆದರೆ ಈ ವಿಚಾರದಲ್ಲಿ ದರ್ಶನ್ ಪರಸ್ಪರ ಅಂತರ ಕಾಯ್ದುಕೊಂಡೇ ಬಂದರೆ ಸುದೀಪ್ ಮಾತ್ರ ದರ್ಶನ್ ಕಡೆ ಸದಾ ಸ್ನೇಹದ ಹಸ್ತ ಚಾಚುತ್ತಲೇ ಇದ್ದಾರೆ. ಇದುವರೆಗೂ ಸುದೀಪ್ ಸಾಕಷ್ಟು ಬಾರಿ ದರ್ಶನ್ ಕುರಿತು ಮಾತನಾಡಿದ್ದಾರೆ.

    ದರ್ಶನ್ ಬಗ್ಗೆ ಅಭಿಮಾನಿಗಳು ಕೇಳಿದ ಪ್ರಶ್ನೆಗಳಿಗೆ ಈ ರೀತಿ ಉತ್ತರಿಸಿದ ಸುದೀಪ್

    ಕೆಲ ದಿನಗಳ ಹಿಂದೆ ಹೊಸಪೇಟೆಯಲ್ಲಿ ದರ್ಶನ್ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿದಾಗ ಸುದೀಪ್ ದರ್ಶನ್ ಬೆಂಬಲಕ್ಕೆ ನಿಂತಿದ್ದರು. ಆಗ ಸುದೀಪ್ ಬೆಂಬಲಕ್ಕೆ ದರ್ಶನ್ ಕೂಡ ಧನ್ಯವಾದ ತಿಳಿಸಿದ್ದರು. ಇದನ್ನು ನೋಡಿದ ಅಭಿಮಾನಿಗಳು ಇಬ್ಬರೂ ಬೇಗ ಒಂದಾಗುತ್ತಾರೆ ಎಂದೇ ಅಂದುಕೊಂಡಿದ್ದರು. ಕಳೆದ ವರ್ಷ ಸುಮಲತಾ ಅಂಬರೀಶ್ ಬರ್ತ್‌ಡೇ ಪಾರ್ಟಿಯಲ್ಲಿ ಇಬ್ಬರೂ ಭಾಗವಹಿಸಿದ್ದರೂ ಪರಸ್ಪರ ಮಾತನಾಡಲಿಲ್ಲ. ಈ ಬಗ್ಗೆ ಸುದೀಪ್ ಮಾಧ್ಯಮಗಳ ಜೊತೆ ಮಾತನಾಡಿದ್ದರು. ಸಮಯ ಬಂದಾಗ ಎಲ್ಲಾ ಸರಿ ಹೋಗುತ್ತದೆ ಎಂದಿದ್ದರು. ಸದ್ಯ ಸ್ನೇಹಿತನ ಬಗ್ಗೆ ಸುದೀಪ್ ಈಗ ಮಾತನಾಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ. 

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts