ವಿದ್ಯಾರ್ಥಿಗಳಲ್ಲಿ ಉದ್ಯಮಶೀಲ ಅರಿವು

bantakallu
ಉದ್ಯಮಶೀಲ ಜಾಗೃತಿ ಕಾರ್ಯಕ್ರಮ ಬಂಟಕಲ್ಲು ಕಾಲೇಜಿನಲ್ಲಿ ಗುರುವಾರ ನಡೆಯಿತು
Published on

ಕಾರ್ಕಳ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಾಣಿಜ್ಯೋದ್ಯಮ ಅಭಿವೃದ್ಧಿ ಘಟಕ ಮಂಗಳೂರಿನ ಎಂಎಸ್‌ಎಂಇ ಅಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬಗ್ಗೆ ಅರಿವು ಮೂಡಿಸಲು ಉದ್ಯಮಶೀಲ ಜಾಗೃತಿ ಕಾರ್ಯಕ್ರಮ ಗುರುವಾರ ಕಾಲೇಜಿನಲ್ಲಿ ನಡೆಯಿತು.

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಅಧ್ಯಕ್ಷ ಹರೀಶ್ ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಎಂಎಸ್‌ಎಂಇ ಅಭಿವೃದ್ಧಿ ಸಂಸ್ಥೆ ಸಹಾಯಕ ನಿರ್ದೇಶಕ ಸುಂದರ್ ಶೇರಿಗಾರ್, ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಸಣ್ಣ ಉದ್ಯಮ ಮತ್ತು ಮಧ್ಯಮ ಉದ್ಯಮಗಳ ಪ್ರಾಮುಖ್ಯತೆ ತಿಳಿಸಿದರು.
ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ವಿದ್ಯಾರ್ಥಿಗಳು ಉದ್ಯಮಿಗಳಾಗಲು ಸಂಸ್ಥೆಯ ವಾಣಿಜ್ಯೋದ್ಯಮ ಅಭಿವೃದ್ಧಿ ಘಟಕದ ಮುಂದಿನ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಸಂಸ್ಥೆ ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಡೀನ್‌ಗಳು ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ವಾಣಿಜ್ಯೋದ್ಯಮ ಅಭಿವೃದ್ಧಿ ಘಟಕದ ಸಂಯೋಜಕ ಡಾ.ಮಧುಕರ್ ನಾಯಕ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net