ಮಸ್ಕಿ: ಇತ್ತಿಚೀಗೆ ಡೆಂೆ ಉಲ್ಬಣಗೊಳ್ಳುತ್ತಿದ್ದು ಅದನ್ನು ತಡೆಗಟ್ಟಲು ಪರಿಸರ ಸ್ವಚ್ಛತೆ ಕಾಪಾಡಬೇಕು ಎಂದು ತಹಸೀಲ್ದಾರ್ ಮಲ್ಲಪ್ಪ.ಕೆ.ಯರಗೋಳ್ ಹೇಳಿದರು.
ಇದನ್ನೂ ಓದಿ: ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಿ
ಕೇಂದ್ರ ಶಾಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಪುರಸಭೆಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಡೆಂೆ ರೋಗದ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ರೋಗದ ಬಗ್ಗೆ ಭಯ ಬೇಡ ಸ್ವಚ್ಛತೆಗೆ ಆದ್ಯತೆ ನೀಡಿ. ನೀರು ನಿಲ್ಲದಂತೆ ಮುನ್ನಚ್ಚರಿಕೆ ವಹಿಸಿ, ಪದೆ ಪದೇ ಜ್ವರ ಬಂದಾಗ ನಿರ್ಲಕ್ಷ್ಯ ಮಾಡದೇ ಚಿಕಿತ್ಸೆ ಪಡೆಯಿರಿ. ಸಾರ್ವಜನಿಕರಿಗೆ ರೋಗ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಲು ಹಾಗೂ ಧೈರ್ಯ ತುಂಬುವ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಮುಖ್ಯವಾಗಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ಆದ್ದರಿಂದ ಸಾರ್ವಜನಿಕರು ಕಸವನ್ನು ಎಲ್ಲೇಂದರಲ್ಲಿ ಹಾಕಬೇಡಿ ಎಂದು ಮನವಿ ಮಾಡಿದರು. ಡಾ. ಮೌನೇಶ, ವಿವಿಧ ಇಲಾಖೆ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಶಾಲಾ ಮಕ್ಕಳು ಪಾಲ್ಗೊಂಡಿದ್ದರು.