More

    ಪರಿಸರ ಸ್ನೇಹಿ ಮತ ಕೇಂದ್ರಗಳ ಸ್ಥಾಪನೆ

    ಕಂಪ್ಲಿ: ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕಂಪ್ಲಿ ತಾಲೂಕು ಸ್ವೀಪ್ ನೋಡಲ್ ಅಧಿಕಾರಿ ಹಾಗೂ ತಾಪಂ ಇಒ ಶ್ರೀಕುಮಾರ್ ತಿಳಿಸಿದರು.

    ಇದನ್ನೂ ಓದಿ: ಪ್ರಜಾಪ್ರಭುತ್ವದಲ್ಲಿ ಯುವಕರ ಮತದಾನ ಅತ್ಯಮೂಲ್ಯ

    ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಪಂ, ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಸೋಮವಾರ ಸಣಾಪುರ, ನೆಲ್ಲುಡಿ ಮತ್ತು ದೇವಲಾಪುರ ಗ್ರಾಪಂ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಹಬ್ಬವಿದ್ದಂತೆ, ಯಾರೂ ಮತದಾನದಿಂದ ವಂಚಿತರಾಗಬಾರದು. ಯಾವುದೇ ಆಮೀಷಕ್ಕೊಳಗಾಗಬಾರದು. ಮತದಾರರ ಗಮನಸೆಳೆಯಲು ಪಿಂಕ್, ಪರಿಸರ ಸ್ನೇಹಿ ಮತಕೇಂದ್ರಗಳನ್ನು ಸ್ಥಾಪಿಸಲಾಗುವುದು. ನರೇಗಾ ಯೋಜನೆಯಡಿ ದಿನಗೂಲಿ ಹೆಚ್ಚಳವಾಗಿದ್ದು, ಗುಳೆ ಹೋಗದೆ ನರೇಗಾ ಸದ್ಬಳಕೆ ಮಾಡಿಕೊಳ್ಳಿ ಎಂದರು.

    ನರೇಗಾ ಎಡಿ. ಕೆ.ಎಸ್.ಮಲ್ಲನಗೌಡ ಮಾತನಾಡಿ, ತಾಲೂಕಿನ ಎಲ್ಲಾ ಹತ್ತು ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಆರಂಭಗೊಂಡಿದ್ದು, ಏ.1ರಂದು ಸುಮಾರು 10ಸಾವಿರಕ್ಕೂ ಅಧಿಕ ಕಾರ್ಮಿಕರು ಕಾರ್ಯನಿರತರಾಗಿದ್ದಾರೆ ಎಂದರು.
    ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts