ಶಿವಮೊಗ್ಗ: ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಮುಖ್ಯವಾಗಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವ ಕುರಿತು ಜನಾಂದೋಲನ ರೂಪಿಸಬೇಕಿದೆ ಎಂದು ಕುವೆಂಪು ವಿವಿ ಕುಲಸಚಿವ ಸ್ನೇಹಲ್ ಲೋಖಂಡೆ ಹೇಳಿದರು.
ನಗರದ ಹೊರವಲಯದ ಸಕ್ರೆಬೈಲ್ ಆನೆ ಬಿಡಾರದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಬುಧವಾರ ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಪ್ಲಾಸ್ಟಿಕ್‌ನಿಂದ ಆರೋಗ್ಯ ಮತ್ತು ವನ್ಯಜೀವಿಗಳ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದರು.
ಕುವೆಂಪು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕಬಳಕೆಯ ಪ್ಲಾಸ್ಟಿಕ್ ಉತ್ಪಾದನೆಗೆ ಕಡಿವಾಣ ಹಾಕದಿದ್ದರೆ ಭವಿಷ್ಯದಲ್ಲಿ ದೊಡ್ಡ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಎಸ್.ನಾಗರಾಜ್ ಮಾತನಾಡಿ, ಎಲ್ಲ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸರ್ಕಾರ ಕೂಡಲೇ ನಿಲ್ಲಿಸುವಂತೆ ಆದೇಶ ಹೊರಡಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದರು.
ಆರ್‌ಎಫ್‌ಒ ವಿನಯ್‌ಕುಮಾರ್, ತಾಪಂ ಸಹಾಯಕ ನಿರ್ದೇಶಕ ಎಸ್.ಲೋಹಿತ್, ಪಿಡಿಒ ಕೃಷ್ಣಮೂರ್ತಿ, ಸಿಬ್ಬಂದಿ ರವಿ, ರಾಮಚಂದ್ರ, ಕುಮಾರ್, ಗೌರಿಶಂಕರ್, ಗಣೇಶ್, ಜಯಂತ್ ಬಾಬು, ಅರುಣ್ ಉಪಸ್ಥಿತರಿದ್ದರು.