ಪರಿಸರದ ಸ್ವಚ್ಛತೆ, ಸಸ್ಯವರ್ಧನೆ, ನೀರಿನ ಸಂರಕ್ಷಣೆ ಅತೀ ಅಗತ್ಯ

pdb (2)
Published on

ಪಡುಬಿದ್ರಿ: ಪರಿಸರದ ಸ್ವಚ್ಛತೆ, ಸಸ್ಯವರ್ಧನೆ, ನೀರಿನ ಸಂರಕ್ಷಣೆ ಇಂದಿನ ಅತೀ ಅಗತ್ಯ. ಮಕ್ಕಳು ತಮ್ಮ ಮನೆಯಲ್ಲಿ ಒಂದು ಗಿಡವನ್ನಾದರೂ ನೆಟ್ಟು, ಸಂರಕ್ಷಿಸಿ, ಪೋಷಿಸಬೇಕು ಎಂದು ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರತಿನಿಧಿ ಪ್ರೊ. ನಿತ್ಯಾನಂದ ಹೇಳಿದರು.

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪ್ರಜ್ಞಾ ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂಜೀವ ನಾಯ್ಕ, ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಶ್ರೀಕಾಂತ್ ರಾವ್, ಆಂಗ್ಲಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಮಂಜುನಾಥ್ ಎ.ವಿ. ಗಿಡಗಳನ್ನು ನೆಟ್ಟರು. ಶಾಲಾ ಮೇಲುಸ್ತುವಾರಿ ಚಂದ್ರಶೇಖರ್, ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸಂದೀಪ್ ಕುಮಾರ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಉಡುಪಿ ಜಿಲ್ಲಾ ಮಾರ್ಗದರ್ಶಿ ಅಧಿಕಾರಿ ಜಯಶಂಕರ ಕಂಗಣ್ಣಾರು ಸ್ವಾಗತಿಸಿ, ನಿರೂಪಿಸಿದರು. ಪ್ರಜ್ಞಾ ಇಕೋ ಕ್ಲಬ್ ಸಂಚಾಲಕಿ ನವ್ಯಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net