ಪರಿಸರ ಸ್ನೇಹಿ ಚೌತಿ ಆಚರಿಸಿ

blank

ಕಾರವಾರ:ಮಣ್ಣಿನಿಂದ ತಯಾರಿಸಿದ, ನೈಸರ್ಗಿಕ ಬಣ್ಣವನ್ನು ಬಳಸಿದ ಗಣೇಶ ವಿಗ್ರಹಗಳನ್ನು ಪೂಜಿಸುವ ಮೂಲಕ, ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ತಿಳಿಸಿದರು.
ಅವರು ಬುಧವಾರ ಕೆಎಲ್‌ಇ ಸೊಸೈಟಿಯ ವಿ.ಕೆ. ಹೈಸ್ಕೂಲ್ ಅಂಕೋಲಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ, ಸಂಗಮ ಸೇವಾ ಸಂಸ್ಥೆ (ರಿ) ಬಾಳೇಗುಳಿ, ಹಾಗೂ ಕೆಎಲ್‌ಇ ಸೊಸೈಟಿಯ ವಿ.ಕೆ. ಹೈಸ್ಕೂಲ್, ಇವರ ಸಹಯೋಗದೊಂದಿಗೆ ಆಯೋಜಿಲಾಗಿದ್ದ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಕೇವಲ ಮಣ್ಣಿನ ಗಣೇಶನನ್ನು ಬಳಸುವಂತೆ ಹಾಗೂ ಹಸಿರು ಪಟಾಕಿಗಳನ್ನು ಸಿಡಿಸುವಂತೆ ಕುರಿತಾದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು ಮಾಡಲಾಗುತ್ತಿದ್ದು, ವಿಗ್ರಹಗಳ ತಯಾರಿಕೆಗೆ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳು ಹಾಗೂ ಭಾರ ಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣಗಳನ್ನು ಉಪಯೋಗಿಸಿ ನೀರಿನ ಮೂಲಗಳಿಗೆ ವಿಸರ್ಜಿಸುವುದರಿಂದ ನೀರಿನ ಮೂಲಗಳಾದ ಕೆರೆ, ಬಾವಿ, ನದಿ ಇತ್ಯಾದಿಗಳಲ್ಲಿ ನೀರು ಕಲುಷಿತಗೊಂಡು ಪರಿಸರ ಹಾಗೂ ನೀರು ಮಾಲಿನ್ಯವಾಗುವ ಸಂದರ್ಭಗಳು ಹೆಚ್ಚಾಗಿವೆ. ಹಬ್ಬದ ಸಂದರ್ಭದಲ್ಲಿ ಅಲಂಕಾರಿಕ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಜಾಗೃತಿ ಮೂಡಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ, ಮಾತನಾಡಿ, ವಿದ್ಯಾರ್ಥಿಗಳಿಗೆ ಹಬ್ಬದ ಸಂದರ್ಭದಲ್ಲಿ ಕೇವಲ ಹಸಿರು ಪಟಾಕಿಗಳನ್ನು ಬಳಸುವಂತೆ ತಿಳಿಸಿದರು. ಮಾನ್ಯ ರಾಷ್ಟೀಯ ಹಸಿರು ಪ್ರಾಧಿಕಾರದ ಆದೇಶದಂತೆ ಶಿಫಾರಸ್ಸು ಮಾಡಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತದೆ. ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ CSIR (Council of Scientific & Industrial Research) & NEERI (National Environmental Engineering Research Institute) ಚಿಹ್ನೆ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಿದ್ದು, ಇಂತಹ ಪಟಾಕಿಗಳನ್ನು ಮಾತ್ರ ಬಳಸುವಂತೆ ತಿಳಿಸಿದರು. ಪಟಾಕಿಯನ್ನು ಬಳಸುವುದರಿಂದ ಆಗುವ ವಾಯು ಮಾಲಿನ್ಯ, ಶಬ್ಧ ಮಾಲಿನ್ಯ ಹಾಗೂ ಜಲ ಮಾಲಿನ್ಯ, ಮತ್ತು ಸ್ಪೋಟದ ತೀವೃತೆಯಿಂದ ಜೀವ ಸಂಕುಲಗಳಿಗೆ ಆಗುವ ಅನಾಹುತಗಳ ಬಗ್ಗೆ ತಿಳಿಸಿದರು.
ಕೆಎಲ್‌ಇ ಸೊಸೈಟಿಯ ವಿ.ಕೆ. ಹೈಸ್ಕೂಲ್ ವಿಜ್ಞಾನ ಶಿಕ್ಷಕಿ ಗಿರಿಜಾ ತಳವಾರ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಗಮ ಸೇವಾ ಸಂಸ್ಥೆ (ರಿ) ಬಾಳೆಗುಳಿ ಅಧ್ಯಕ್ಷ ರವೀಂದ್ರ ಎನ್.ಶೆಟ್ಟಿ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

https://www.vijayavani.net/health-department-meeting
Share This Article

ಚಳಿಗಾಲದಲ್ಲಿ ಅಲೋವೆರಾ ಜೆಲ್ ಅನ್ನು ತಲೆಗೆ ಹಚ್ಚಿಕೊಳ್ಳಬಹುದೇ? aloe vera gel benefits

aloe vera gel benefits : ಚಳಿಗಾಲದಲ್ಲಿ ತಲೆಹೊಟ್ಟು ಸಾಮಾನ್ಯ. ಚಳಿಗಾಲದಲ್ಲಿ ಶುಷ್ಕ ಗಾಳಿಯು ನಮ್ಮ…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನೆಣ್ಣೆ ಕುಡಿದರೆ ಏನಾಗುತ್ತೆ ಗೊತ್ತಾ? Coconut Oil Benefits

Coconut Oil Benefits:  ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವ ಆಹಾರವೇ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ.…

ಕಣ್ಣಿಗೊಂದು ಸವಾಲ್…ಈ ಫೋಟೋದಲ್ಲಿರುವ ಹಾವನ್ನು ಗುರುತಿಸಬಲ್ಲಿರಾ? Optical Illusion..

Optical Illusion: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ…