ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ರನ್ನರ್ಅಪ್ ಡ್ರೋನ್ ಪ್ರತಾಪ್ (Drone Prathap) ಇತ್ತೀಚಿನ ದಿನಗಳಲ್ಲಿ ತುಂಬಾ ಸದ್ದು ಮಾಡುತ್ತಿದ್ದು, ಕೆಲ ದಿನಗಳ ಹಿಂದಷ್ಟೇ ತಾವು ನಾಯಕನಾಗಿ ನಟಿಸುತ್ತಿರುವುದಾಗಿ ಘೋಷಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಪ್ರತಾಪ್ ಇದೀಗ ತಾವು ಮಾಡಿರುವ ಒಂದು ಕೆಲಸದಿಂದ ಜನರ ಕೆಂಗಣ್ಣಿಗೆ ಗುರಿಯಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನೀರಿನಲ್ಲಿ ಸೋಡಿಯಮ್ ಬ್ಲ್ಯಾಸ್ಟ್ ಮಾಡಿರುವ ಡ್ರೋನ್ ಪ್ರತಾಪ್ (Drone Prathap) ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಬಳಿಕ ಡಿಲೀಟ್ ಮಾಡಿದ್ದಾರೆ. ವ್ಯಾಪಕ ಖಂಡನೆಗೆ ಗುರಿಯಾಗಿದೆ. ಒಬ್ಬ ಸೆಲೆಬ್ರಿಟಿಯಾಗಿ ಸಾಮಾಜಿಕ ಜವಾಬ್ದಾರಿ ಇಲ್ಲದೆ ವರ್ತಿಸಿದರೆ ಹೇಗೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ವಿಜ್ಞಾನ ಪ್ರಯೋಗದ ಹೆಸರಿನಲ್ಲಿ ವಿಡಿಯೋವೊಂದನ್ನ ರಿಲೀಸ್ ಮಾಡಿದ್ದಾರೆ. ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಇದಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಎಕ್ಸೈಟ್ ಆಗಿದ್ದಾರೆ. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಈ ರೀತಿ ಕೃತ್ಯಗಳು ಮಾಡುವುದು ಕಾನೂನುಬಾಹಿರವಾಗಿದ್ದು, ಪ್ರತಾಪ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹ ಕೇಳಿ ಬಂದಿದೆ. ಕೇಲವಲ ವೀವ್ಸ್ಗಾಗಿ ಈ ರೀತಿ ಮಾಡಿರುವುದು ಸರಿಯಲ್ಲ. ಕೂಡಲೇ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಜರುಗಿಸಬೇಕೆಂದು ನೆಟ್ಟಿಗರು ಹಾಗೂ ಪರಿಸರವಾದಿಗಳು ಆಗ್ರಹಿಸಿದ್ದಾರೆ.
ಸರಿಯಾದ ಸಮಯಕ್ಕೆ Loan ಕಟ್ಟದಿದ್ದಕ್ಕೆ ಪತ್ನಿಯ ಅಶ್ಲೀಲ ಫೋಟೋ ವೈರಲ್; ಮನನೊಂದು ಪ್ರಾಣಬಿಟ್ಟ ನವವಿವಾಹಿತ
ಗೌರವ-ಘನತೆ ಮಹಿಳೆಯರಿಗೆ ಸೀಮಿತವಲ್ಲ, ಪುರುಷರಿಗೂ ಕೂಡ ಇದೆ: HighCourt