ಪರಿಸರ ರಕ್ಷಣೆ ಮುಂದಿನ ಪೀಳಿಗೆಗೆ ಅಮೂಲ್ಯ ಕೊಡುಗೆ

Mbd_Environmental protection
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಸಮಾಜಕ್ಕೆ ಕೊಡುಗೆ ಕೇವಲ ಆರ್ಥಿಕ ನೆರವಿನ ಮೂಲಕ ಆಗಬೇಕೆಂದಿಲ್ಲ. ಪರಿಸರ ರಕ್ಷಣೆ ಹಾಗೂ ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ನಮ್ಮ ಭವಿಷ್ಯದ ಪೀಳಿಗೆಗೆ ಉಚಿತವಾಗಿ ನೀಡಬಹುದಾದ ಅಮೂಲ್ಯ ಕೊಡುಗೆಯಾಗಿದೆ ಎಂದು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್.ಮರಿಯಪ್ಪ ಹೇಳಿದರು.

ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಮಾನವಿಕ ವಿಭಾಗ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಪೃಥ್ವಿ ಪರ್ವ’ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂಪನ್ಮೂಲ ಸೀಮಿತವಾಗಿದ್ದು ಜನಸಂಖ್ಯೆ ಮಾತ್ರ ಅನಿಯಂತ್ರಿತವಾಗಿ ಬೆಳೆಯುತ್ತಿರುವುದು ಬಹುತೇಕ ಸಮಸ್ಯೆಗಳಿಗೆ ಕಾರಣವಾಗಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕೇವಲ ಪರಿಸರ ಸಂರಕ್ಷಣೆ ಧ್ಯೇಯದೊಂದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಸಾಲದು, ಪರಿಸರ ಸಂರಕ್ಷಣೆ ಕೆಲಸಗಳು ವಿದ್ಯಾರ್ಥಿ ಸಮುದಾಯದಿಂದ ಮೂಡಿಬರಬೇಕು ಎಂದರು.

ಪ್ರಾಂಶುಪಾಲ ಡಾ.ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಮಾನವಿಕ ವಿಭಾಗ ಡೀನ್ ಸಂಧ್ಯಾ ಕೆ.ಎಸ್., ಉಪನ್ಯಾಸಕಿ ರಕ್ಷಿತಾ ತೋಡಾರ್, ವಿದ್ಯಾರ್ಥಿ ಸಂಯೋಜಕ ಚೇತನ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಯೋಜಕಿ ದಿಶಾ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಶ್ರೀವಲ್ಲಿ ಹಾಗೂ ಸುದರ್ಶಿನಿ ನಿರೂಪಿಸಿದರು. ತೇಜಸ್ವಿನಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net