ಮುಧೋಳ: ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದೆ. ಹಸಿರು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಮಂಗಳವಾರ ಅರಣ್ಯ ಇಲಾಖೆ ವತಿಯಿಂದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬ್ಯಾಡ್ಮಿಂಟನ್ ಮೈದಾನ, ವಾಕಿಂಗ್ ಟ್ರ್ಯಾಕ್ ಪರಿಶೀಲಿಸಿ ಮಾತನಾಡಿದರು.
ಭವಿಷ್ಯದ ಪೀಳಿಗೆಗೆ ಆರೋಗ್ಯಕರ ವಾತಾವರಣವನ್ನು ಒದಗಿಸುವಲ್ಲಿ ಸಸಿ ನಡೆವ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತದೆ. ಅರಣ್ಯ ಇಲಾಖೆಯ ಈ ಉಪಕ್ರಮವನ್ನು ಸಮಾಜದ ಎಲ್ಲ ವರ್ಗದ ಜನರು ಬೆಂಬಲಿಸಬೇಕು ಎಂದು ಹೇಳಿದರು.