22.5 C
Bengaluru
Sunday, January 19, 2020

ಪಶ್ಚಿಮ ಘಟ್ಟ ಉಳಿವಿಗೆ ತಜ್ಞರ ವರದಿ ಜಾರಿ ಅಗತ್ಯ

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಚಾಮರಾಜನಗರ: ನಿಸರ್ಗ ಮಾತೆಯ ಗರ್ಭಗುಡಿಯಾದ ಪಶ್ಚಿಮ ಘಟ್ಟದ ಸಂರಕ್ಷಣೆಗೆ ತಯಾರಿಸಲಾದ ತಜ್ಞರ ವರದಿಗಳನ್ನು ಜಾರಿ ಮಾಡಲು ಗುತ್ತಿಗೆದಾರರು ಬಿಡುತ್ತಿಲ್ಲ ಎಂದು ಪರಿಸರವಾದಿ ನಾಗೇಶ್‌ಹೆಗಡೆ ಕಳವಳ ವ್ಯಕ್ತಪಡಿಸಿದರು.

ನಗರದ ದೀನಬಂಧು ಆಶ್ರಮದಲ್ಲಿ ಡಾ.ಲೋಹಿಯಾ ಜನ್ಮ ಶತಾಬ್ಧಿ ಟ್ರಸ್ಟ್, ನಾಗವಳ್ಳಿಯ ಪುನರ್ಚಿತ್, ಹೊಂಡರಬಾಳುವಿನ ಅಮೃತಭೂಮಿ ಟ್ರಸ್ಟ್, ಶಾಂತಲಾ ಕಲಾವಿದರ ಸಹಯೋಗದಲ್ಲಿ ಏರ್ಪಡಿಸಿದ್ದ ಮಾಧವ ಗಾಡ್ಗೀಳ್ ಮತ್ತು ಕಸ್ತೂರಿ ರಂಗನ್ ವರದಿಯ ಸಾರಾಂಶ ಮಂಡನೆ ಮತ್ತು ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಶ್ಚಿಮ ಘಟ್ಟದ ಸಂರಕ್ಷಣೆ ಸಂಬಂಧ ಮಾಧವ ಗಾಡ್ಗೀಳ್ ಮತ್ತು ಕಸ್ತೂರಿ ರಂಗನ್ ಅವರು ಸಲ್ಲಿಸಿದ್ದ ವರದಿಗಳನ್ನು ನಮ್ಮನಾಳುವ ರಾಜಕಾರಣಿಗಳು ಸಹ ಸರಿಯಾಗಿ ಓದಿ ಅರ್ಥ ಮಾಡಿಕೊಳ್ಳದೆ ಧಿಕ್ಕರಿಸಿದ್ದಾರೆ. ಅವರೆಲ್ಲ ಗುತ್ತಿಗೆದಾರರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾಧವ ಗಾಡ್ಗೀಳ್ ತಮ್ಮ ವರದಿಯಲ್ಲಿ ನೈಸರ್ಗಿಕ ಸಂಪತ್ತಿನ ರಕ್ಷಣೆ ಬಗ್ಗೆ ಆದ್ಯತೆ ನೀಡಿದ್ದರು. ಕಾಡಿನಲ್ಲಿರುವ ಪ್ರಾಣಿ, ಪಕ್ಷಿ, ಆದಿವಾಸಿಗಳನ್ನು ಅವರಿಷ್ಟದಂತೆ ಬದುಕಲು ಬಿಡಿ ಎಂದು ಹೇಳಿದ್ದರು. ಕಸ್ತೂರಿರಂಗನ್ ತಮ್ಮ ವರದಿಯಲ್ಲಿ ಪಶ್ಚಿಮ ಘಟ್ಟವನ್ನು ನೈಸರ್ಗಿಕ ಪ್ರಾಂತ್ಯ ಮತ್ತು ನಾಗರಿಕ ಪ್ರಾಂತ್ಯ ಎಂದು ವಿಭಜಿಸಿದ್ದರು. ನಿಸರ್ಗದ ಸಂರಕ್ಷಣೆ ಜತೆಗೆ ನಾಗರಿಕ ಪ್ರಾಂತ್ಯಗಳ ರಕ್ಷಣೆಗೆ ಆದ್ಯತೆ ನೀಡಿ ಎಂದು ಸೂಚಿಸಿದ್ದರು ಎಂದು ತಿಳಿಸಿದರು.

ಪರಿಸರ ಸಂರಕ್ಷಣೆ ಸಂಬಂಧ ರಾಜಕಾರಣಿಗಳು ಮತ್ತು ಅಧಿಕಾರಿಗಳು ಪರಿಸರ ತಜ್ಞರು, ಸ್ಥಳೀಯ ವಿಷಯ ತಜ್ಞರ ಮಾತು ಕೇಳುತ್ತಿಲ್ಲ. ಋತುಮಾನಗಳು ಸಮತೋಲವಾಗಿರಲು, ಭೂ ತಾಪಮಾನ ಕಡಿಮೆಯಾಗಲು, ಕೇರಳ ಮತ್ತು ಕೊಡಗಿನಲ್ಲಿ ಸಂಭವಿಸಿದ ಜಲ ಪ್ರಳಯ ಮತ್ತೆ ಮರುಕಳಿಸದಂತೆ ತಡೆಯಬೇಕಾದರೆ ಪಶ್ವಿಮ ಘಟ್ಟಗಳ ಸಂರಕ್ಷಣೆ ಆಗಲೇಬೇಕು ಎಂದು ಪ್ರತಿಪಾದಿಸಿದರು.

ನಿವೃತ್ತ ಅರಣ್ಯಾಧಿಕಾರಿ ಯಲ್ಲಪ್ಪರೆಡ್ಡಿ ಮಾತನಾಡಿ, ಕೊಡಗಿನ ಸ್ಥಿತಿಗತಿ ಕುರಿತು ತಾವು ನೀಡಿದ ವರದಿಯನ್ನು ಮುಚ್ಚಿಡಲಾಯಿತು. ಪರಿಸರ ತಜ್ಞರಲ್ಲದ ಮಾಧವಗಾಡ್ಗೀಳ್ ಮತ್ತು ಕಸ್ತೂರಿ ರಂಗನ್ ಅವರು ಪಶ್ಚಿಮ ಘಟ್ಟದ ಸಂರಕ್ಷಣೆ ಕುರಿತು ವರದಿ ತಯಾರು ಮಾಡುವಾಗಲೂ ಅರಣ್ಯಾಧಿಕಾರಿಯಾಗಿ ಅರಣ್ಯ ಸಂರಕ್ಷಣೆಗೆ ದುಡಿದ ನಮ್ಮಂತವರ ಜತೆ ಕನಿಷ್ಠ ಮಾತನಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪರಮಶಿವಯ್ಯ ಅವರ ವರದಿಯನ್ನು ಬಿಸಾಡಿ ಎತ್ತಿನಹೊಳೆ ಯೋಜನೆ ಜಾರಿ ಮಾಡಲಾಗುತ್ತಿದೆ. ಬಂಡೀಪುರ ಅರಣ್ಯದೊಳಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-766 ಅನ್ನು ಎಲಿವೇಟೆಡ್ ರಸ್ತೆಯಾಗಿಸಿ ರಾತ್ರಿ ವೇಳೆ ಕೇರಳ ರಾಜ್ಯಕ್ಕೆ ವಾಹನ ಸಂಚಾರ ಪುನಾರಂಭಿಸಬೇಕೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಅರಣ್ಯ ನಾಶ ಮಾಡುವ ಇಂತಹ ಯೋಜನೆಗಳನ್ನು ಕೈಬಿಡುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ಪಶ್ಚಿಮ ಘಟ್ಟದೊಳಗೆ ಕೈಗೊಳ್ಳುವ ಯೋಜನೆಗಳಿಂದ ಆಗುವ ಅನಾಹುತಗಳ ಬಗ್ಗೆ ಮನವರಿಕೆ ಮಾಡಲು ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರನ್ನು ಭೇಟಿಗೆ ಸಮಯ ಕೇಳಿದ್ದೇನೆ. ಯಾವಾಗ ಕಾಲಾವಕಾಶ ನೀಡುತ್ತಾರೆಯೊ ಗೊತ್ತಿಲ್ಲ ಎಂದರು.

ವಿಮರ್ಶಕ ಡಿ.ಎಸ್.ನಾಗಭೂಷಣ್ ಮಾತನಾಡಿ, ಕೇರಳ ಮತ್ತು ಕೊಡಗಿನಲ್ಲಿ ಜಲಪ್ರಳಯಗಳು ಸಂಭವಿಸಿದ್ದು ಹೊಸದಲ್ಲ. ಹಿಂದಿನಿಂದಲೂ ಹಲವು ಕಡೆ ಘಟಿಸುತ್ತಲೇ ಇದೆ. ಅವುಗಳ ನಿಯಂತ್ರಣಕ್ಕೆ ನಮ್ಮ ರಾಜಕಾರಣಿಗಳು ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡುವುದು ಒಂದು ಫ್ಯಾಷನ್ ಆಗಿದೆ. ಜಲ ಪ್ರಳಯ, ಭೂ ತಾಪಮಾನ ಏರುತ್ತಿದ್ದರೂ ನಮ್ಮ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳು ಅಭಿವೃದ್ಧಿ ಯೋಜನೆಗಳನ್ನು ಪರಾಮರ್ಶಿಸುವ ಕೆಲಸ ಮಾಡುತ್ತಿಲ್ಲ. ಪರಿಸರಕ್ಕೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲು ಮುಂದಾಗುತ್ತಿಲ್ಲ ಎಂದು ಹೇಳಿದರು.
ದೀನಬಂಧು ಸಂಸ್ಥೆಯ ಜಿ.ಎಸ್.ಜಯದೇವ್, ಪ್ರಜ್ಞಾ, ವಿದ್ಯಾರ್ಥಿಗಳು ಇತರರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...