ಮರ ಕಡಿದದ್ದಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ

tree
Published on

ಕೋಟ: ಇಲ್ಲಿನ ಪ್ರವಾಸಿ ಬಂಗ್ಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ರವಾಸಿ ಮಂದಿರದ ಸಮೀಪವಿರುವ ಭಾರಿ ಗಾತ್ರದ ಮರಗಳನ್ನು ರಾತೋರಾತ್ರಿ ಕಡಿಯಲಾಗಿದೆ. ಕಟ್ಟಡ ನಿರ್ಮಾಣದ ನೆಪದಲ್ಲಿ ಅರಣ್ಯ ಇಲಾಖೆ ಅನುಮತಿ ಮೇರೆಗೆ ಈಗಾಗಲೇ ಸಾಕಷ್ಟು ಮರಗಳನ್ನು ಕಡಿಯಲಾಗಿದ್ದು, ಶೇ.60ರಷ್ಟು ಕಾಮಗಾರಿ ಮುಗಿದಿದ್ದರೂ ಮತ್ತೊಮ್ಮೆ ಮರಗಳ ಕಡಿದಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅರಣ್ಯ ಇಲಾಖೆಯೂ ನಿರ್ಲಿಪ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರು, ಪರಿಸರ ಪ್ರೇಮಿಗಳು ಇಲಾಖೆಯನ್ನು ತರಾಟೆ ತೆಗದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net