22.5 C
Bengaluru
Sunday, January 19, 2020

ಕಾಳಿಂಗ ಸರ್ಪ ಕಾರಿಡಾರ್ ಬೇಡಿಕೆ

Latest News

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹರೀಶ್ ಮೋಟುಕಾನ ಮಂಗಳೂರು

ಪಶ್ಚಿಮ ಘಟ್ಟದ ಮೇಲೆ ಮಾನವನ ಆಕ್ರಮಣ, ಆಹಾರದ ಕೊರತೆ ಮೊದಲಾದ ಕಾರಣಗಳಿಂದ ಕಾಳಿಂಗ ಸರ್ಪದ ಸಂತತಿ ಅಳಿವಿನಂಚಿನಲ್ಲಿದೆ. ಈ ಜೀವ ಪ್ರಭೇದವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪರಿಸರ ಪ್ರೇಮಿಗಳು ಪ್ರತ್ಯೇಕ ಕಾಳಿಂಗ ಸರ್ಪ ಕಾರಿಡಾರ್ ನಿರ್ಮಿಸಬೇಕು ಎನ್ನುವ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಗೆ ಪತ್ರ ಬರೆದಿರುವ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಪ್ರತಿಪಕ್ಷದ ನಾಯಕರಿಗೂ ಮನವಿ ಸಲ್ಲಿಸಿದೆ. ಆನೆ ಕಾರಿಡಾರ್, ಹುಲಿ ಕಾರಿಡಾರ್‌ನಂತೆ ವಿಶೇಷ ಒತ್ತು ನೀಡಿ ಕಾಳಿಂಗ ಸರ್ಪ ಕಾರಿಡಾರ್ ನಿರ್ಮಾಣ ಮಾಡಿದರೆ ಅರಣ್ಯ ಸಂರಕ್ಷಣೆಯೂ ಸಾಧ್ಯವಾಗುತ್ತದೆ ಎನ್ನುವುದು ಪರಿಸರವಾದಿಗಳ ಲೆಕ್ಕಾಚಾರ.

ಕರಾವಳಿ ಜಿಲ್ಲೆಗಳಲ್ಲಿ ಕಾಳಿಂಗ ಸರ್ಪ ಕಂಡು ಬಂದರೆ ಅದನ್ನು ಹಿಡಿದು ಕಾಡಿಗೆ ಬಿಡಲಾಗುತ್ತಿದೆ. ಆದರೆ ಕೊಡಗು, ಚಿಕ್ಕಮಗಳೂರು ಮೊದಲಾದ ಕಡೆ ಕಾಫಿ ಎಸ್ಟೇಟ್‌ಗಳಲ್ಲಿ ಈ ಹಾವುಗಳು ಕಾಣ ಸಿಕ್ಕಿದರೆ ಕೊಂದು ಹಾಕುವುದು ಸಾಮಾನ್ಯವಾಗಿದೆ. ವನ್ಯಜೀವಿ ಕಾಯ್ದೆ ಪ್ರಕಾರ ಇದನ್ನು ಕೊಂದರೆ 6 ವರ್ಷಗಳ ತನಕ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಆಹಾರದ ಕೊರತೆ: ಇಲಿ, ಹೆಗ್ಗಣ, ಕಪ್ಪೆ ಮೊದಲಾದುವು ಕಾಳಿಂಗ ಸರ್ಪದ ಆಹಾರವಾಗಿದೆ. ಇಂದು ಇವುಗಳನ್ನು ಮನುಷ್ಯ ವಿಷವಿಟ್ಟು ಕೊಲ್ಲುತ್ತಿದ್ದಾನೆ. ಇದನ್ನು ತಿಂದ ಸರ್ಪವೂ ಸಾಯುತ್ತಿದೆ. ಇಲಿ, ಹೆಗ್ಗಣಗಳ ಸಂತತಿಯೂ ನಾಶವಾಗುತ್ತಿರುವುದರಿಂದ ಹಾವುಗಳಿಗೆ ಆಹಾರದ ಕೊರತೆ ಇದೆ. ಕಾಳಿಂಗ ಸರ್ಪ ಕಾರಿಡಾರ್ ನಿರ್ಮಾಣ ಮಾಡುವ ಮೂಲಕ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ವಿನಾಶದಂಚಿನ ಜೀವ ಪ್ರಭೇದಗಳನ್ನು ಸಂರಕ್ಷಿಸಬಹುದು ಎನ್ನುತ್ತಾರೆ ಪರಿಸರವಾದಿಗಳು.

ಮನುಷ್ಯನ ಆಕ್ರಮಣ: ಕಾಳಿಂಗ ಸರ್ಪ 5ರಿಂದ 6 ಅಡಿ ಉದ್ದದ ಅತ್ಯಂತ ವಿಷಪೂರಿತ ಹಾವು. ವಿಶ್ವದಲ್ಲೇ ಅತಿ ಉದ್ದವಾಗಿದ್ದು, ಹಾವುಗಳಿಗೆ ರಾಜನಿದ್ದಂತೆ. ಕಾಳಿಂಗ ಸರ್ಪ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ನೀರಿನ ಲಭ್ಯತೆ ಇರುವಲ್ಲಿ ವಾಸವಾಗಿರುತ್ತವೆ. ಆದರೆ ಮನುಷ್ಯ ಪ್ರಕೃತಿಯ ಮೇಲೆ ಮಾಡುತ್ತಿರುವ ಆಕ್ರಮಣದಿಂದ ಜೀವ ಸಂತತಿ ನಾಶವಾಗುತ್ತಿವೆ.

ಕಾಳಿಂಗ ಸರ್ಪ ಪಶ್ಚಿಮ ಘಟ್ಟದಲ್ಲಿ ಅಳಿವಿನಂಚಿನಲ್ಲಿರುವ ಜೀವ ಪ್ರಬೇಧ. ಕಾಡು ನಾಶ ಆಗುತ್ತಿರುವುದರಿಂದ ಇವುಗಳ ಜೀವಕ್ಕೆ ಕುತ್ತು ಬಂದಿದೆ. ಕಾರಿಡಾರ್ ನಿರ್ಮಾಣ ಮಾಡಿದಾಗ ಪಶ್ಚಿಮ ಘಟ್ಟದ ಅರಣ್ಯದ ಜತೆಗೆ ಕಾಳಿಂಗ ಸರ್ಪದ ಸಂತತಿ ಕೂಡಾ ವೃದ್ಧಿಸಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮುಂದೆ ಕಾರಿಡಾರ್ ಬೇಡಿಕೆ ಇಟ್ಟಿದ್ದೇವೆ. ಸಾಕಾರ ಆಗುವ ತನಕ ಹೋರಾಟ ಮುಂದುವರಿಸುತ್ತೇವೆ.
|ಶಶಿಧರ ಶೆಟ್ಟಿ ಪರಿಸರವಾದಿ ಮಂಗಳೂರು

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...