

ಹೆಬ್ರಿ: ಸೋರುತ್ತಿರುವ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಪಂ ವ್ಯಾಪ್ತಿಯ ಸಳ್ಳೆಕಟ್ಟೆ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ತಾಪಂ ಇಒ ಶಶಿಧರ್ ಕೆಜೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಜಯವಾಣಿಯೊಂದಿಗೆ ಮಾತನಾಡಿ, ಶಾಲೆ ಹಾಗೂ ಅಂಗನವಾಡಿ ಸೋರುತ್ತಿದ್ದು, ಸಂಬಂಧಪಟ್ಟ ಇಲಾಖೆ ಇಂಜಿನಿಯರ್ ಗಳೊಂದಿಗೆ ಮಾತನಾಡಿ, ಶೀಘ್ರ ದುರಸ್ತಿಗೊಳಿಸಲು ಆದೇಶಿಸಿದ್ದೇನೆ ಎಂದರು.
2 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಸ್ಟೋರ್ ರೂಂ ನಿರ್ಮಿತಿ ಕೇಂದ್ರದಿಂದ ನಿರ್ಮಾಣ ಮಾಡಲಾಗಿದೆ. ಇದರ ಇಂಜಿನಿಯರ್ ಶೀಘ್ರದಲ್ಲಿ ಅಂಗನವಾಡಿಗೆ ಭೇಟಿ ನೀಡಿ ಸಮರ್ಪಕವಾಗಿ ಕೆಲಸ ನಡೆಸಿ ದುರಸ್ತಿ ಮಾಡಲಾಗುವುದೆಂದು ತಿಳಿಸಿದ್ದಾರೆ.
ಮುಖ್ಯ ಶಿಕ್ಷಕ ಸದಾಶಿವ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ವಸಂತಿ ಉಪಸ್ಥಿತರಿದ್ದರು.