ಪೀತುಬೈಲ್ ಎನ್‌ಕೌಂಟರ್ ಸ್ಥಳಕ್ಕೆ ಇಒ ಭೇಟಿ

visit
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಪೀತುಬೈಲ್ ಎನ್‌ಕೌಂಟರ್ ನಡೆದ ಸ್ಥಳಕ್ಕೆ ಹೆಬ್ರಿ ತಾಲೂಕು ಇಒ ಶಶಿಧರ್ ಕೆ.ಜೆ ಭೇಟಿ ನೀಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನ ಮೇರೆಗೆ ನಿರ್ಮಾಣವಾದ ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸೇತುವೆ ರಕ್ಷಣೆಗೆ ಪ್ರೊಟೆಕ್ಷನ್ ವಾಲ್ ನಿರ್ಮಿಸಲು ಬೇಡಿಕೆ ಇದೆ. ಜನರು ರಸ್ತೆ ನಿರ್ಮಾಣಕ್ಕೆ ಮನವಿ ಮಾಡಿದ್ದಾರೆ. ತಿಂಗಳಮಕ್ಕಿ ಹಾಗೂ ಪೀತುಬೈಲಿನಲ್ಲಿ ದನದ ಕೊಟ್ಟಿಗೆ ನಿರ್ಮಿಸಿ ಕೊಡುವ ಬಗ್ಗೆ ಪ್ರಸ್ತಾವನೆ ಬಂದಿದೆ. ಈ ಕುರಿತು ಪರಿಶೀಲನೆ ನಡೆಸಲು ಉನ್ನತಾಧಿಕಾರಿಗಳ ನಿರ್ದೇಶನದಂತೆ ಬಂದಿರುವುದಾಗಿ ತಿಳಿಸಿದರು.

ಇಲ್ಲಿನ ಜನರ ಆಶೋತ್ತರಗಳನ್ನು ಆದ್ಯತೆ ಮೇರೆಗೆ ಮಾಡಿಕೊಡಲಾಗುವುದು. ಸಂಬಂಧಪಟ್ಟ ಇಂಜಿನಿಯರ್‌ಗಳಿಗೆ ಜನರ ಬೇಡಿಕೆ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಇಒ ಹೇಳಿದರು. ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆಯ ಎಇ ಮಧು, ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net