More

    ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ

    ಬೆಳಗಾವಿ: ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ ಕಾಯಂಗೊಳಿಸುವುದು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಸಂಘದವರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.
    ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಜೀವದ ಹಂಗು ತೊರೆದು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ಸರಿಯಾದ ವೇತನ ಹಾಗೂ ಸರ್ಕಾರದ ಯಾವುದೇ ಸೌಲಭ್ಯ ಸಿಗುತ್ತಿಲ್ಲ.

    ಕೆಲಸಕ್ಕೆ ತಕ್ಕಂತೆ ವೇತನವೂ ಇಲ್ಲ, ಸೇವಾ ಭದ್ರತೆಯೂ ಇಲ್ಲ. ಈ ವಿಚಾರವಾಗಿ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಸೇವೆ ಪರಿಗಣಿಸಿ ಕಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸರ್ಕಾರದಿಂದ ಹಿರಿಯ ಸಿಬ್ಬಂದಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ನಮಗೂ ಒದಗಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
    ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಾದ ಸ್ನೇಹಾ ಪಾಟೀಲ, ಆಶಾ ಪೂಜೇರಿ, ಶ್ರೀದೇವಿ ಮಡಿಮನಿ, ಕಾಶಿಬಾಯಿ ದಾಸರ ಸಂಗೀತಾ ಮೇತ್ರಿ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts