ಸಂಜಯಗಾಂಧಿ ಶಾಲೆಗೆ ಉಪಕರಣ ಕೊಡುಗೆ

gan (2)
Published on

ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಕುಂದಾಪುರ ಮಿಡ್‌ಟೌನ್ ವತಿಯಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಂಪಾರು ಸಂಜಯಗಾಂಧಿ ಶಾಲೆಯ ಪ್ರಯೋಗಾಲಯಕ್ಕೆ ಉಪಕರಣಗಳು ಹಾಗೂ ಗ್ರೀನ್ ಬೋರ್ಡ್‌ಗಳನ್ನು ಕೊಡುಗೆ ನೀಡಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ಶೇಖರ್ ಎನ್ ಶೆಟ್ಟಿ ಅವರು ಶಾಲಾ ಆಡಳಿತಾಧಿಕಾರಿ ಉದಯ ಕುಮಾರ್ ಅವರಿಗೆ ಕೊಡುಗೆ ಹಸ್ತಾಂತರಿಸಿದರು. ರಾಷ್ಟ್ರಮಟ್ಟದ ಎನ್‌ಎಂಎಂಎಸ್ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ಪ್ರೌಢಶಾಲಾ ವಿದ್ಯಾರ್ಥಿ ಶ್ರೀಚಂದನ ಅವರನ್ನು ಸನ್ಮಾನಿಸಲಾಯಿತು.

ಸಂಜಯಗಾಂಧಿ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಚೈತ್ರಾ ಯಡಿಯಾಳ್, ಅಬ್ದುಲ್ ಬಷೀರ್, ಸುಕುಮಾರ್ ಶೆಟ್ಟಿ, ನಿರಂಜನ್, ಉದಯ್ ಕುಮಾರ ಶೆಟ್ಟಿ, ಸುನೀಲ್ ಶೆಟ್ಟಿ, ರೋಟರಿ ಕುಂದಾಪುರ ಮಿಡ್ ಟೌನ್‌ನ ನಿಯೋಜಿತ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ರೋಟರಿ ಸದಸ್ಯರು ಉಪಸ್ಥಿತರಿದ್ದರು. ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಲಾಸಿನಿ ಶೆಟ್ಟಿ ವಂದಿಸಿದರು. ಸರೋಜಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net