More

    ನ.24 ರಿಂದ 26 ತನಕ 3 ದಿನ ಎಸ್ಕಾಂಗಳ 98 ನಗರ-ಪಟ್ಟಣಗಳಲ್ಲಿ ತಂತ್ರಜ್ಞಾನ ತಂತ್ರಾಂಶ ಸೇವೆ ಅಲಭ್ಯ

    ಬೆಂಗಳೂರು:
    ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಬರುವ 98 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ
    ಅಳವಡಿಸಲಾಗಿರುವ ಮಾಹಿತಿ ತಂತ್ರಜ್ಞಾನ ಸೇವೆ ತಂತ್ರಾಂಶಗಳು ಹಾಗೂ ಹಾರ್ಡ್ ವೇರ್ ಗಳನ್ನು ಉನ್ನತೀಕರಿಸುತ್ತಿರುವ ಹಿನ್ನೆಲೆಯಲ್ಲಿ ನ.24ರಿಂದ 26ರವರೆಗೆ 3 ದಿನಗಳ ಕಾಲ ಮಾಹಿತಿ ತಂತ್ರಜ್ಞಾನ ಆಧರಿತ ವಿದ್ಯುತ್ ಸೇವೆ ಲಭ್ಯವಿರುವುದಿಲ್ಲ.
    ಈ ಅವಧಿಯಲ್ಲಿ ಆನ್ ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು/ ಲೋಡ್ ಬದಲಾವಣೆ, ನಗದು ಪಾವತಿ, ಆನ್ ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಗಳು ಹಾಗೂ ಇತರ ಸೇವೆಗಳು ಲಭ್ಯವಿರುವುದಿಲ್ಲ.
    ಆನ್ ಲೈನ್ ಸೇವೆಗಳ ಅಲಭ್ಯತೆಯನ್ನು ಗಮನಿಸಿ ಗ್ರಾಹಕರು ಹಾಗೂ ಗುತ್ತಿಗೆದಾರರು ತಮ್ಮ ಅವಶ್ಯಕತೆಗಳನ್ನು ಮುಂಚಿತವಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಬೆಸ್ಕಾಂ ವಿನಂತಿಸಿದೆ.
    ಈ ಅವದಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ವಿರುವುದಿಲ್ಲ. ಗ್ರಾಹಕರು ಆತಂಕ ಪಡಬೇಕಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಆನ್ ಲೈನ್ ಸೇವೆ ಲಭ್ಯ
    ಇಲ್ಲದ ಪಟ್ಟಣಗಳ ವಿವರ:

    ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ,
    ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.

    ಸೆಸ್ಕ್: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.
    ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

    ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.

    ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts