ಕೇಂದ್ರ ಸರ್ಕಾರದ ಬಜೆಟ್​​ಗೆ ಕಾಂಗ್ರೆಸ್ ಪ್ರಣಾಳಿಕೆಯೇ ಸ್ಫೂರ್ತಿ: ಈಶ್ವರ್​ ಖಂಡ್ರೆ

eshwar khandre

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ ಮೂರನೇ ಅವಧಿಯ ಚೊಚ್ಚಲ ಬಜೆಟ್​ನಲ್ಲಿ ಭರಪೂರ ಘೋಷಣೆಗಳನ್ನು ಮಾಡಲಾಗಿದ್ದು, ವಿತ್ತ ಸಚಿವರು ಕ್ಷೇತ್ರ ವಲಯಕ್ಕೆ ಅನುಗುಣವಾಗಿ ಬಜೆಟ್​​​ ಮಂಡನೆ ಮಾಡಿದ್ದು, ಶಿಕ್ಷಣ, ಉದ್ಯೋಗ, ಕೈಗಾರಿಕೆ, ಮಹಿಳೆ, ಕೃಷಿ, ಸೇರಿದಂತೆ ಅನೇಕ ಕ್ಷೇತ್ರಗಳಿಗೆ ನಿರ್ಣಾಯಲ ಘೋಷಣೆಗಳನ್ನು ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಅರಣ್ಯ ಸಚಿವೆ ಈಶ್ವರ್ ಖಂಡ್ರೆ ಸಂಸತ್ತಿನಲ್ಲಿ ಮಂಡಿಸಿರುವ ಕೇಂದ್ರ ಬಜೆಟ್​ಗೆ ಕಾಂಗ್ರೆಸ್ ಪ್ರಣಾಳಿಕೆಯೇ ಸ್ಫೂರ್ತಿ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ತೀವ್ರ ಹಿನ್ನೆಡೆ ಅನುಭವಿಸಿದ ಬಳಿಕ ಬಿಜೆಪಿ ಮತ್ತು ಎನ್.ಡಿ.ಎ.ಗೆ ಬುದ್ಧಿ ಬಂದಿದೆ. ಕಾಂಗ್ರೆಸ್ ಪಕ್ಷ ತನ್ನ ಲೋಕಸಭಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಯುವಕರಿಗೆ ಅಪ್ರೆಂಟಿಷಿಪ್ ನೀಡುವ ಯೋಜನೆ ಸೇರಿದಂತೆ ಹಲವು ಅಂಶಗಳನ್ನು ಅಳವಡಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

Eshwar Khandre

ಇದನ್ನೂ ಓದಿ: ಕೇಂದ್ರ ಬಜೆಟ್​ 2024; ಕುರ್ಚಿ ಉಳಿಸಿಕೊಳ್ಳಲು ಆಯವ್ಯಯ ಮಂಡಿಸಲಾಗಿದೆ ಎಂದ ವಿಪಕ್ಷದ ಸಂಸದರು

ಬಿಜೆಪಿಯ ಕೆಟ್ಟ ನೀತಿಗಳಿಂದಾಗಿ ದೇಶದಲ್ಲಿ 45 ವರ್ಷದಲ್ಲೇ ಕಂಡು ಕೇಳರಿಯದ ನಿರುದ್ಯೋಗ ಸಮಸ್ಯೆ ಉಂಟಾಗಿತ್ತು. ಕಳೆದ 10 ವರ್ಷಗಳ ಕಾಲ ನಿರುದ್ಯೋಗ ಸಮಸ್ಯೆ ಬಗ್ಗೆ ಗಮನವನ್ನೇ ಹರಿಸದಿದ್ದ ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ. ಸಂಸತ್ತಿನಲ್ಲಿ ಮಂಡಿಸಿರುವ ಕೇಂದ್ರ ಬಜೆಟ್​ಗೆ ಕಾಂಗ್ರೆಸ್ ಪ್ರಣಾಳಿಕೆಯೇ ಸ್ಫೂರ್ತಿ ಎಂದು ಹೇಳಿದ್ದಾರೆ.

ತಾರತಮ್ಯದ ಬಜೆಟ್

ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎಂಬ ಗಾದೆಯಂತೆ ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಸಿಂಹಪಾಲು ಹಾಗೂ ಎನ್​​ಡಿಎ ಸರ್ಕಾರ ಇರುವ ರಾಜ್ಯಗಳಿಗೆ ಆದ್ಯತೆ ನೀಡಿ, ಇತರ ರಾಜ್ಯಗಳನ್ನು ಕಡೆಗಣಿಸಲಾಗಿದ್ದು, ಈ ಬಜೆಟ್ ತಾರತಮ್ಯದಿಂದ ಕೂಡಿದೆ. ಇದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಕರ್ನಾಟಕಕ್ಕೆ ಈ ಬಜೆಟ್​ನಲ್ಲಿ ಏನು ನೀಡಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…