More

    ಕುಮಾರ ಪರ್ವತದಲ್ಲಿ ಟ್ರೆಕ್ಕಿಂಗ್​ಗೆ ನಿರ್ಬಂಧ; ಅರಣ್ಯ ಸಚಿವರು ಕೊಟ್ಟ ಕಾರಣ ಹೀಗಿದೆ

    ಮಂಗಳೂರು: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪ್ರಸಿದ್ಧ ಚಾರಣ ಸ್ಥಳವಾದ ಕುಮಾರ ಪವರ್ತದಲ್ಲಿ ಟ್ರಕ್ಕಿಂಗ್​ಗೆ ನಿರ್ಬಂಧ ಹೇರಿರುವ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಜನಜಂಗುಳಿಯಿಂದ ಪರಿಸರ ಹಾನಿ ಭೀತಿ ಎದುರಾಗಿರುವ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರ್​ ಖಂಡ್ರೆ, ಚಾರಣ ನಿಯಂತ್ರಣ ಸಂಬಂಧ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಅದರ ಜೊತೆಗೆ ಚಾರಣಕ್ಕೆ ಆನ್ ಲೈನ್ ದಾಖಲಾತಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಕುಮಾರ ಪರ್ವತ ಚಾರಣಪಥದಲ್ಲಿ ಜನಜಂಗುಳಿಯಿಂದ ಪರಿಸರ ಹಾನಿ ಭೀತಿ ಎದುರಾಗಿದೆ. ಹೀಗಾಗಿ ಚಾರಣ ನಿಯಂತ್ರಣ ಸಂಬಂಧ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಅದರ ಜೊತೆಗೆ ಚಾರಣಕ್ಕೆ ಆನ್ ಲೈನ್ ದಾಖಲಾತಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಅಪಾರ ಹಾನಿಯಾಗುತ್ತಿದೆ. ಕರಾವಳಿ ಪ್ರದೇಶಗಳನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡುವ ಗುರಿ ಇದೆ.

    ಕುಮಾರ ಪರ್ವತದಲ್ಲಿ ಟ್ರೆಕ್ಕಿಂಗ್​ಗೆ ನಿರ್ಬಂಧ; ಅರಣ್ಯ ಸಚಿವರು ಕೊಟ್ಟ ಕಾರಣ ಹೀಗಿದೆ

    ಇದನ್ನೂ ಓದಿ: ಟೆಸ್ಟ್​ ಪಂದ್ಯದ ಕಾಮೆಂಟರಿ ವೇಳೆ ದಿಢೀರ್​ ಹೊರನಡೆದ ಸುನೀಲ್​ ಗಾವಸ್ಕರ್​; ಕಾರಣ ಹೀಗಿದೆ

    ರಾಜ್ಯದ ಎಲ್ಲಾ ಚಾರಣ ಪಥಗಳನ್ನು ಆನ್​ಲೈನ್ ದಾಖಲಾತಿ ವ್ಯಾಪ್ತಿಗೆ ತರುತ್ತೇವೆ. ಏಕಾಏಕಿ ಸಾವಿರಾರು ಜನ ಹೋದರೆ ಇಕ್ಕಟ್ಟಾಗಿ ಸಮಸ್ಯೆ ಆಗುತ್ತದೆ. ಕುಮಾರ ಪರ್ವತದಲ್ಲಿ ಅಂದಾಜು 20 ಕಿ.ಮೀ ಚಾರಣ ಇರಬಹುದು. ಇಂಥ ಜಾಗದಲ್ಲಿ ಎಷ್ಟು ಜನ ಹೋಗಬಹುದು ಅಂತ ನೋಡಿ ಆನ್​ಲೈನ್ ಮೂಲಕ ನಿಗದಿ ಮಾಡುತ್ತೇವೆ. ಮಿತಿ ಹಾಕಿ‌ ಚಾರಣಿಗರಿಗೆ ನಾವು ಪಾಸ್​​ಗಳನ್ನು ಕೊಡುತ್ತೇವೆ. ಅದನ್ನು ಮೀರಿ ಯಾರಿಗೂ‌ ಬರಲು ಅವಕಾಶ‌ ಇಲ್ಲ. ಚಾರಣ ನಿಯಂತ್ರಣವನ್ನು ಮಾಡಲೇಬೇಕಿದೆ, ಅದರ ಅಗತ್ಯ ಇದೆ ಎಂದು ಪ್ರತಿಪಾದಿಸಿದ್ದಾರೆ.

    ಕರಾವಳಿ ನಿಯಂತ್ರಣ ವಲಯದಲ್ಲಿ ಹಲವೆಡೆ‌ ಕಟ್ಟಡಗಳ ನಿರ್ಮಾಣ ಆಗಿದೆ. ಈ ಬಗ್ಗೆ‌ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಈ ಭಾಗದಲ್ಲಿ ಮೂರು ಎಕರೆಗಿಂತ ಕಡಿಮೆ ಬೇಸಾಯ ಮಾಡುವ ರೈತರಿದ್ದಾರೆ. ಅವರಿಗೆ‌ ತೊಂದರೆ ಆಗದ ರೀತಿಯಲ್ಲಿ ಅರಣ್ಯ ಒತ್ತುವರಿ ತೆರವಿಗೆ ಸೂಚಿಸಿದ್ದೇನೆ. ಜೊತೆಗೆ‌ ಅರಣ್ಯ ಮತ್ತು‌ ಕಂದಾಯ ಇಲಾಖೆ ವತಿಯಿಂದ ಜಂಟಿ ಸರ್ವೇ ಆಗಬೇಕಿದೆ. ಅಂಥ ಕಡೆ ಸರ್ವೇ ನಡೆಸಿ ಅರಣ್ಯ ಇಲಾಖೆ ವಶಕ್ಕೆ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

    CRZ ವಲಯದಲ್ಲಿನ ಅಕ್ರಮದ ಬಗ್ಗೆ ಪರಿಶೀಲನೆ ಮಾಡಿ ವರದಿ ಕೇಳಿದ್ದೇನೆ. ಅಕ್ರಮ ರೆಸಾರ್ಟ್ ಹಾಗೂ ಹೋಮ್​​ಸ್ಟೇಗಳಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಉಳಿಸಲು ಹಾಗೂ ಕಾಡ್ಗಿಚ್ಚು ನಿಯಂತ್ರಣಕ್ಕೆ ಖಾಸಗಿ ಹೆಲಿಕಾಪ್ಟರ್ ಅವಶ್ಯಕತೆ ಇದ್ದರೆ ಬಳಕೆ ಮಾಡುತ್ತೇವೆ ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts