More

    ಇನ್ಮುಂದೆ ನರೇಗಾದಡಿ ಸಿಗಲಿದೆ 150 ದಿನ ಕೆಲಸ.. ಕೂಲಿದರ ಹೆಚ್ಚಳ ಸಾಧ್ಯತೆ

    ಕಲಬುರಗಿ: ನರೇಗಾ ಯೋಜನೆಯಡಿ ಕೂಲಿ ದಿನವನ್ನು ಒಬ್ಬರಿಗೆ ಗರಿಷ್ಠ 150 ದಿನಕ್ಕೆ ಹೆಚ್ಚಳ ಮಾಡುವ ಚಿಂತನೆ ಇದೆ. ಕೇಂದ್ರ ಸರ್ಕಾರ ನಿರ್ದೇಶನ ನೀಡಿದರೆ ಈಗಿರುವ 275 ರೂ. ಕೂಲಿ ದರವನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

    ಹೊನ್ನ ಕಿರಣಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿಯಡಿ ನಡೆಯುತ್ತಿರುವ ಹೊಲದ ಬದು ನಿರ್ಮಾಣ ಹಾಗೂ ಇನ್ನಿತರ ಕಾಮಗಾರಿ ವೀಕ್ಷಿಸಿದ ಬಳಿಕ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಇದನ್ನೂ ಓದಿರಿ ಬೇಡಮ್ಮ ಆನ್​ಲೈನ್ ಗುಮ್ಮ: ತಜ್ಞರು, ವೈದ್ಯರು, ನಟರ ಆಕ್ರೋಶ, ಇಲಾಖೆಯಲ್ಲೇ ಆಕ್ಷೇಪ

    ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೆ ಘೋಷಿಸಿದ 20 ಲಕ್ಷ ‌ಕೋಟಿ ರೂ. ಪ್ಯಾಕೇಜ್​ನಲ್ಲಿ 40 ಸಾವಿರ ಕೋಟಿ ರೂ. ಹಂಚಿಕೆ ಮಾಡಿದೆ. ಹೀಗಾಗಿ ಒಬ್ಬರಿಗೆ ಕೂಲಿ ದಿನವನ್ನು ಗರಿಷ್ಠ 150 ದಿನಗಳಿಗೆ ಹೆಚ್ಚಿಸುವ ಚಿಂತನೆ ಇದೆ ಎಂದು ವಿವರಿಸಿದರು.

    ಉದ್ಯೋಗಕ್ಕಾಗಿ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದವರು ಕರೊನಾ ಲಾಕ್​ಡೌನ್​ನಿಂದಾಗಿ ಗ್ರಾಮಗಳಿಗೆ ವಾಪಸ್​ ಆಗಿದ್ದಾರೆ. ಉದ್ಯೋಗ ಕೇಳಿದ ಎಲ್ಲರಿಗೂ ಜಾಬ್​ಕಾರ್ಡ್ ನೀಡುವಂತೆ ಎಲ್ಲ ಜಿಪಂ ‌ಸಿಇಒಗಳಿಗೆ ಸೂಚನೆ ನೀಡಿದ್ದೇನೆ. ಕೇಂದ್ರ ಸರ್ಕಾರ ನಿರ್ದೇಶನ ನೀಡಿದರೆ ಕೂಲಿ ದರ ಹೆಚ್ಚಿಸಲಾಗುವುದು ಎಂದು ಭರವಸೆ ‌ನೀಡಿದರು.

    ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರು ಬೇಕಾದರೂ ಉದ್ಯೋಗ ‌ಖಾತ್ರಿಯಡಿ ಜಾಬ್ ಕಾರ್ಡ್ ಪಡೆಯಬಹುದು ಎಂದು ಈಶ್ವರಪ್ಪ ‌ಹೇಳಿದರು.

    ಇದನ್ನೂ ಓದಿರಿ ಮೃತ ಸ್ನೇಹಿತನ ಮನೆ ಕಟ್ಟಿ.. ಅಲ್ಲೇ 11ನೇ ದಿನದ ಕಾರ್ಯ ನೆರವೇರಿಸಿದ ಯುವಕರ ಸಾಹಸಗಾಥೆ ಇದು!

    ಅಸಮಾಧಾನ ಇರುವುದು ನಿಜ: ಪಕ್ಷದಲ್ಲಿ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿದಂತೆ ಅಸಮಾಧಾನ ಇರುವುದು ನಿಜ. ಆದರೆ, ಸೂಕ್ತ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದು ಈಶ್ವರಪ್ಪ ಹೇಳಿದರು.

    ವಿಧಾನ ಪರಿಷತ್ ಚುನಾವಣೆಗೆ ಯಾರನ್ನು ನಿಲ್ಲಿಸಬೇಕು ಎಂಬ ಬಗ್ಗೆ ಶನಿವಾರ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ ‌ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಂಸದ ಡಾ‌‌.ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮೂಡ, ಎಂ.ವೈ.ಪಾಟೀಲ, ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿರಸಗಿ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಇದ್ದರು.

    ಇದನ್ನೂ ಓದಿರಿ ಮುತ್ತಪ್ಪ ರೈ ವಿಲ್​ ಸೀಕ್ರೆಟ್​ ರಿವೀಲ್​: ಮನೆಗೆಲಸದವರ ಲೈಫ್​ ಸೆಟಲ್, ಮಕ್ಕಳಿಬ್ಬರ ಆಸ್ತಿ ಮೌಲ್ಯ ಎಷ್ಟು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts