More

    ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್​ವೈ ವಿರುದ್ಧ ವಾಗ್ದಾಳಿ

    ಶಿವಮೊಗ್ಗ: ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಕ್ರೋಶಗೊಂಡಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

    ಇದನ್ನೂ ಓದಿ:  ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಾಣಿಕೆ ಆರೋಪ: ಎನ್​​ಸಿಪಿಸಿಆರ್​​ ಅಧಿಕಾರಿಗಳ ದಾಳಿ 20 ಯುವತಿಯರ ರಕ್ಷಣೆ

    ಶುಕ್ರವಾರ ಸಂಜೆ ಶಿವಮೊಗ್ಗದ ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಈಶ್ವರಪ್ಪ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿದರು ಮಾತನಾಡಿದರು. ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುವುದಿಲ್ಲ ಎನ್ನುತ್ತಲ್ಲೇ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು. ಇದೇ ವೇಳೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದಾರೆ.

    ಪ್ರಧಾನಿ ಮೋದಿ ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ಧ ಇದ್ದವರು. ಮೋದಿ ವಿರೋಧಿ ನಾನಲ್ಲ. ಇವತ್ತು ಅವರು ವಿಶ್ವ ನಾಯಕ. ವಂಶ ಪಾರಂಪರ್ಯದ ಬಗ್ಗೆ ಹೆಚ್ಚು ಮಾತಾಡಲ್ಲ. ರಾಜ್ಯದ ಬಿಜೆಪಿ ಯಲ್ಲಿ ಕೂಡ ಕಾಂಗ್ರೆಸ್ ಸಂಸ್ಕೃತಿ ಬೆಳೆಯುತ್ತಿರುವುದು ದೌರ್ಭಾಗ್ಯ ಎಂದರು.

    ಕಳೆದ ವಿಧಾನಸಭೆ ಚುನಾವಣೆ ವೇಳೆ ನನಗೆ ಆದ ಅನ್ಯಾಯ ಸರಿಪಡಿಸುವ ಭರವಸೆ ಪಕ್ಷದ ನಾಯಕರಿಂದ ಸಿಕ್ಕಿತ್ತು. ಬಿಎಸ್​ ಯಡಿಯೂರಪ್ಪ ಸಹ ಹಾವೇರಿಯಲ್ಲಿ ಕಾಂತೇಶ್ ಗೆ ಟಿಕೆಟ್ ಕೊಡಿಸಿ ಗೆಲ್ಲಿಸುವೆ ಎಂದಿದ್ದರು. ಆದರೆ ಅಲ್ಲಿ ಬೊಮ್ಮಾಯಿ ಮತ್ತು ಶೋಭಾ ಪರ ಮಾತ್ರ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ಮುನ್ನ ಶೋಭಾ ಪರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಸೂಚನೆಯನ್ನು ಹೇಗೆ ಕೊಟ್ಟರು ಎಂದು ಬಿಎಸ್​ವೈ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.

    ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಕೂಡ ನನ್ನ ಪುತ್ರ ಕಾಂತೇಶ್ ಪರ ನಿಲುವು ವ್ಯಕ್ತಪಡಿಸಿದ್ದರು. ಬೊಮ್ಮಾಯಿಗೆ ಇಷ್ಟವಿಲ್ಲದಿದ್ದರೂ ಟಿಕೆಟ್ ಕೊಡಿಸಿದ್ದಾರೆ. ಸಂಸದೆ ಶೋಭಾ ವಿರುದ್ಧ ಕೂಗೆದ್ದರೂ ಟಿಕೆಟ್ ಕೊಡಿಸಿದ್ದಾರೆ. ಸದಾನಂದ ಗೌಡ, ಸಿ.ಟಿ.ರವಿ, ಕಟೀಲು, ಪ್ರತಾಪ ಸಿಂಹ ಅವರು ಹಿಂದುತ್ವ ಪರ ಧ್ವನಿ ಎತ್ತಿದ್ದೇ ಟಿಕೆಟ್ ತಪ್ಪಲು ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಒಬ್ಬ ಮಗ ಎಂಪಿ, ಇನ್ನೊಬ್ಬ ಶಾಸಕ ಜೊತೆಗೆ ಜಿಜೆಪಿ ರಾಜ್ಯಾಧ್ಯಕ್ಷ, ನನ್ನ ಎದೆ ಬಗೆದರೆ ರಾಮ ಮತ್ತು ಮೋದಿ. ಆದರೆ ಯಡಿಯೂರಪ್ಪ ಎದೆ ಬಗೆದರೆ ಇಬ್ಬರು ಮಕ್ಕಳು ಮತ್ತು ಶೋಭಾ ಎಂದು ವಾಗ್ದಾಳಿ ನಡೆಸಿದರು.

    ಈಗ ಜಗದೀಶ್​ ಶೆಟ್ಟರ್ ಬೆಳಗಾವಿ ಅಭ್ಯರ್ಥಿ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅಂದರೆ ಅವರೇ ಹೈಕಮಾಂಡ್. ಮೋದಿ ಇಡೀ ದೇಶ ನನ್ನ ಪರಿವಾರ ಎಂದರೆ ರಾಜ್ಯದಲ್ಲಿ ಬಿಜೆಪಿ ಸ್ಥಿತಿಯು ಪರಿವಾರದ ಪರಿಕಲ್ಪನೆಯ ಕಾಂಗ್ರೆಸ್ ನಂತಾಗಿದೆ. ಪಕ್ಷ ಬಿಟ್ಟು ಹೋಗಬಾರದು ಎಂದವ ನಾನು. ಆದರೆ ಪಕ್ಷವೇ ತಾಯಿ ಎಂದಾಗ ಆಕೆಯ ಕತ್ತು ಹಿಸುಕುವ ಪ್ರಯತ್ನ ನಡೆದಿರುವಾಗ ಸುಮ್ಮನೆ ಇರಬೇಕಾ ಎಂದು ಅಕ್ರೋಶ ವ್ಯಕ್ತಪಡಿಸಿದರು.

    ಬೇಕಾದವರಿಗೆ ಟಿಕೆಟ್ ಕೊಡಿಸಿದೀರಲ್ಲ ಅದೆಷ್ಟು ಜನರ ಗೆಲ್ಲಿಸುವಿರೋ ನೋಡುವೆ. ಒಂದು ಕುಟುಂಬದ ಹಿಡಿತದಿಂದ ಪಕ್ಷ ತಪ್ಪಿಸಲು ನಾನು ಶಿವಮೊಗ್ಗ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಇದು ಉದ್ವೇಗದ ತೀರ್ಮಾನ ಅಲ್ಲ. ಸಿದ್ಧಾಂತ ನಿರ್ಧಾರ ಎಂದು ಹೇಳಿದರು.

    ಈಶ್ವರಪ್ಪ ಅಭಿಮಾನಿಗಳ ಸಭೆಗೆ ಉತ್ತಮ ಪ್ರತಿಕ್ರಿಯೆ: ಇಬ್ಬರು ಮಾಜಿ ಮೇಯರ್ ಗಳು, ಆರು ಮಂದಿ ಮಾಜಿ ಕಾರ್ಪೋರೇಟರ್ ಗಳು, ಬಾಹುಸಾರ ಕ್ಷತ್ರಿಯ ಸಮಾಜ, ಜಿಲ್ಲಾ ಬ್ರಾಹ್ಮಣ ಸಮಾಜ, ಕುರುಬರ ಸಮಾಜ, ವಿಪ್ರ ನೌಕರರ ಸಂಘ, ವೀರಶೈವ ಸಮಾಜ, ಶಿವಮೊಗ್ಗ ಅಷ್ಟೇ ಅಲ್ಲದೇ ಹಾವೇರಿ ಜಿಲ್ಲೆಯ ಪ್ರಮುಖರು ಭಾಗಿಯಾಗಿದ್ದರು.

    ಲೋಕಸಮರ: ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts