More

    ಕ್ಲೀನ್ ಚಿಟ್ ಸಿಕ್ಕರೂ ಯಾಕೆ ನನ್ನನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ? ಸಿಎಂಗೆ ಈಶ್ವರಪ್ಪ ಪ್ರಶ್ನೆ!

    ಬಾಗಲಕೋಟೆ: ಗುತ್ತಿಗೆದಾರನಿಂದ ಕಮಿಷನ್ ಪಡೆದ ಪ್ರಕರಣದ ಸಂಬಂಧ ಕೆ.ಎಸ್ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿ ಬಂದಿತ್ತು. ಇದಾಗಿ ಪೊಲೀಸ್ ತನಿಖೆಯಿಂದ ಕ್ಲೀನ್​​ಚಿಟ್ ಸಿಕ್ಕಿದರೂ, ಮತ್ತೆ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ಲಭಿಸಿರಲಿಲ್ಲ. ಇದೀಗ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದಿರಲು ಬಿಜೆಪಿಯಲ್ಲಿ ನಿಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆಯಾ ಎನ್ನುವ ಪ್ರಶ್ನೆ ಈಶ್ವರಪ್ಪ ಉತ್ತರಿಸುತ್ತಾ, ನಿರ್ಲಕ್ಷ್ಯ ಎನ್ನುವ ಪ್ರಶ್ನೆ ಬರುವುದಿಲ್ಲ. ಯಾಕೆ ಸಚಿವ ಸ್ಥಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

    ಆಪಾದನೆ ಬಂದಾಗ ನಾನೇ ರಾಜೀನಾಮೆ ಕೊಡಲು ಮುಂದಾದಾಗ ಪಕ್ಷದ ಹಿರಿಯರು ಆರಂಭದಲ್ಲಿ ಬೇಡ ಎಂದಿದ್ದರು. ನಂತರ ಅವರನ್ನು ಒಪ್ಪಿಸೊ ರಾಜೀನಾಮೆ ಕೊಟ್ಟಿದ್ದೆ. ನನಗೆ ವಯಸ್ಸಾಗಿಲ್ಲ. ಸಚಿವ ಸ್ಥಾನ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಾಗಿರುವುದು ಮುಖ್ಯಮಂತ್ರಿಗಳು ಎಂದು ಹೇಳಿದರು.

    ಕೆ.ಜೆ.ಚಾರ್ಜ್ ಅವರ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಡಿ ಎಂದು ವಿಪಕ್ಷ ನಾಯಕನಾಗಿ ನಾನೇ ಒತ್ತಾಯಿಸಿದ್ದೆ. ಅವರು ರಾಜೀನಾಮೆ ಕೊಟ್ಟರು. ಕ್ಲೀನ್ ಚೀಟ್ ಬಂದ ತಕ್ಷಣ ಕಾಂಗ್ರೆಸ್​​ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡರು. ಇದೀಗ ನನಗೆ ಕ್ಲೀನ್ ಚಿಟ್ ಸಿಕ್ಕಿದರೂ, ಸಂಪುಟಕ್ಕೆ ಸೇರಿಸಿಲ್ಲ ಯಾಕೆಂಬುದು ನನಗೆ ಗೊತ್ತಿಲ್ಲ. ಈ ವಿಚಾರವಾಗಿ ಸಿಎಂ ರಾಜ್ಯದ ಜನತೆಗೆ ಉತ್ತರ ನೀಡಬೇಕಿದೆ ಎಂದರು.

    ಯಾವುದೇ ವಿಚಾರದಲ್ಲಿ ಪಕ್ಷ ನನ್ನನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ. ಒಂದು ವೇಳೆ ನಿರ್ಲಕ್ಷ್ಯ ಮಾಡಿದ್ದೇ ಆಗಿದ್ದಲ್ಲಿ, ಪಕ್ಷದ ಕಚೇರಿ ಉದ್ಘಾಟನೆಗೆ ಬಾಗಲಕೋಟೆಗೆ, ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಕಳುಹಿಸುತ್ತಿರಲಿಲ್ಲ ಎಂದು ಈಶ್ವರಪ್ಪ ಹೇಳಿದರು.

    ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಸಚಿವ ಸಂಪುಟ ಸೇರುವ ವಿಚಾರದಲ್ಲಿ ಈಶ್ವರಪ್ಪ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಈಶ್ವರಪ್ಪ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಈ ಬಗ್ಗೆ ಕೇವಲ ವದಂತಿ ಹಬ್ಬಿದೆ. ನಾನೇ ಈಶ್ವರಪ್ಪ ಅವರ ಜತೆಗೆ ಮಾತನಾಡುತ್ತೇನೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts