More

    ಈಶ್ವರಪ್ಪಗೆ ಜೆಡಿಎಸ್ ಪಕ್ಷದ ಬೆಂಬಲವಿಲ್ಲ: ಕೆಬಿಪಿ

    ಶಿವಮೊಗ್ಗ:ನನಗೆ ಜೆಡಿಎಸ್ ಬೆಂಬಲವಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಯಾವುದೇ ಕಾರಣಕ್ಕೂ ಶಿವಮೊಗ್ಗ ಜೆಡಿಎಸ್ ಮುಖಂಡರು ಕೆಎಸ್‌ಈಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.

    ದೇಶದ ರಕ್ಷಣೆ, ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಎಲ್ಲರ ಆಶಯ. ಹಿರಿಯರ ತೀರ್ಮಾನದಂತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿವೈಆರ್ ಗೆಲುವಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದಲೇ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಆಗಿರುವ ಬಿ.ವೈ.ರಾಘವೇಂದ್ರರಿಗೆ 1.50 ಲಕ್ಷ ಮತಗಳು ದೊರೆಯಲಿವೆ. ಭದ್ರಾವತಿಯಲ್ಲೂ ಹೆಚ್ಚು ಮತಗಳು ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಯಾವುದೇ ಗೊಂದಲವಿಲ್ಲ. ದೇಶದ ಹಿತಕ್ಕಾಗಿ ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಲಿದ್ದಾರೆ. ಒಟ್ಟಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. 1983 ರಲ್ಲಿ ನಮ್ಮ ಪಕ್ಷದಿಂದ ಎಂ.ಆನಂದರಾವ್ ಸ್ಪರ್ಧಿಸಿದ್ದ ವೇಳೆ ಅಂದಿನ ಜನತಾ ಪರಿವಾರದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೆವು. ಹೀಗಾಗಿ ನಮಗೆ ಮೈತ್ರಿ ಹೊಸದೇನಲ್ಲ ಎಂದು ತಿಳಿಸಿದರು.
    ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ದೀಪಕ್ ಸಿಂಗ್, ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಎಸ್.ಜ್ಞಾನೇಶ್ವರ್, ನರಸಿಂಹ ಗಂಧದಮನೆ, ವಿನಯ್, ಎನ್.ಜಿ.ನಾಗರಾಜ್, ಪುಷ್ಪಾ ಶೆಟ್ಟಿ, ಕೃಷ್ಣ, ಬೊಮ್ಮನಕಟ್ಟೆ ಮಂಜುನಾಥ, ವಿನ್ಸೆಂಟ್ ರೋಡ್ರಿಗಸ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts