More

    ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ಎಸ್. ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

    ಶಿವಮೊಗ್ಗ: ಪುತ್ರನಿಗೆ ಹಾವೇರಿ ಟಿಕೆಟ್​ ತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ (ಏಪ್ರಿಲ್​ 12) ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

    ಮಾಜಿ ಸಿವ ಕೆ.ಎಸ್​. ಈಶ್ವರಪ್ಪ ಒಟ್ಟು 98.92 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದು, 4.28 ಕೋಟಿ ರೂ ಮೌಲ್ಯದ ಚರಾಸ್ತಿ ಹಾಗೂ 10.95 ಕೋಟಿ ರೂ ಮೌಲ್ಯದ ಸ್ತಿರಾಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಪತ್ನಿ ಜಯಲಕ್ಷ್ಮೀ ಹೆಸರಿನಲ್ಲಿ 35.20 ಕೋಟಿ ರೂ ಮೌಲ್ಯದ ಆಸ್ತಿ ಇರುವುದಾಗಿ ಈಶ್ವರಪ್ಪ ತಮ್ಮ ಚುನಾವಣಾ ಅಫಿಡೆವಿಟ್​ನಲ್ಲಿ ಘೋಷಿಸಿದ್ದಾರೆ.

    ಇದನ್ನೂ ಓದಿ: ಬಾಬಾಸಾಹೇಬ್ ಅಂಬೇಡ್ಕರ್ ಅವರೇ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

    ಈಶ್ವರಪ್ಪ ಅವರು ಪ್ರಸ್ತುತ 25 ಲಕ್ಷ ರೂ. ಹಾಗೂ ಅವರ ಪತ್ನಿ ಜಯಲಕ್ಷ್ಮೀ 2 ಲಕ್ಷ ರೂ. ನಗದು ಹೊಂದಿರುವುದಾಗಿ ತಿಳಿಸಿದ್ದಾರೆ. ಈಶ್ವರಪ್ಪ ಹೆಸರಿನಲ್ಲಿ 300 ಗ್ರಾಂ ಬಂಗಾರ, 2 ಕೆಜಿ ಬೆಳ್ಳಿ, ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ 500 ಗ್ರಾಂ ಬಂಗಾರ, 5 ಕೆಜಿ ಬೆಳ್ಳಿ, ನಿಧಿಗೆ ಗ್ರಾಮದಲ್ಲಿ ಬಳಿ 1 ಎಕರೆ 31 ಗುಂಟೆ ಕೃಷಿ ಭೂಮಿ ಇದ್ದು, 4 ಎಕರೆ 24 ಗುಂಟೆ ಕೃಷಿಯೇತರ ಭೂಮಿ ಇದೆ. ಶಿವಮೊಗ್ಗದಲ್ಲಿ ವಾಸದ ಮನೆ. ಬೆಂಗಳೂರಿನ‌ ಜಯನಗರದಲ್ಲಿ ನಿವೇಶನ ಇರುವುದಾಗಿ ತಿಳಿಸಿದ್ದಾರೆ.

    ಈಶ್ವರಪ್ಪ ಹೆಸರಿನಲ್ಲಿ ಸಾಲ 5.87 ಕೋಟಿ ರೂ. ಸಾಲ ಇದ್ದು, ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ 70.80 ಲಕ್ಷ ರೂ. ಇದೆ. ಮಾಜಿ ಸಚಿವ ಈಶ್ವರಪ್ಪ ಯಾವುದೇ ವಾಹನ ಹೊಂದಿಲ್ಲ. ಅವರ ಅಫಿಡವಿಟ್ ಪ್ರಕಾರ, 2022-23ನೇ ಹಣಕಾಸು ವರ್ಷದಲ್ಲಿ ಅವರ ವಾರ್ಷಿಕ ಆದಾಯ  98.92 ಲಕ್ಷ ಎಂದು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಅಫಿಡೆವಿಟ್​ನಲ್ಲಿ ಶಿವಮೊಗ್ಗ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಘೋಷಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts