ನವದೆಹಲಿ: ಪ್ರಮುಖ ಭದ್ರತಾ ಕಾರ್ಯಾಚರಣೆಯೊಂದರಲ್ಲಿ, ಭಾರತೀಯ ಗುಪ್ತಚರ ಸಂಸ್ಥೆಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯರಾಗಿರುವ ಹರಿಯಾಣದ ಜನಪ್ರಿಯ ಮಹಿಳಾ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ.
ಜ್ಯೋತಿ ಮಲ್ಹೋತ್ರಾ ನಡುವಿನ ನಂಟಿನ ಕುರಿತು ಕುರಿತು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಟ್ರಾವೆಲ್ ವಿತ್ JO ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಮಲ್ಹೋತ್ರಾ, ಸೆಪ್ಟೆಂಬರ್ 2024 ರಲ್ಲಿ ಪುರಿಗೆ ಭೇಟಿ ನೀಡಿದ್ದರು. ಅಲ್ಲದೇ ಅಲ್ಲಿನ ಮಹಿಳಾ ಯೂಟ್ಯೂಬರ್ ಒಬ್ಬರನ್ನು ಭೇಟಿಯಾಗಿರುವುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ ಎಂದು ಪುರಿ ಎಸ್ಪಿ ವಿನಿತ್ ಅಗರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳ ದಾಳಿ; 5.75 ಕೆಜಿ ಚಿನ್ನ ವಶ; ಇಬ್ಬರ ಬಂಧನ| Custom-officers
ಜ್ಯೋತಿ ಅವರ ಯೂಟ್ಯೂಬ್ ಚಾನೆಲ್ ನಲ್ಲಿ 3.77 ಲಕ್ಷ ಚಂದಾದಾರರು ಮತ್ತು ಇನ್ಸ್ಟಾಗ್ರಾಮ್ ನಲ್ಲಿ 1.33 ಲಕ್ಷ ಫಾಲೋವರ್ಸ್ ಇದ್ದಾರೆ. ಅವರು ದೆಹಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುವ ಪಾಕ್ ಸಿಬ್ಬಂದಿಯೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.
ಮಲ್ಹೋತ್ರಾ ಅವರ ಪುರಿಗೆ ಭೇಟಿಯ ಉದ್ದೇಶವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಮತ್ತು ಅವರು ಎಲ್ಲಿ ಉಳಿದುಕೊಂಡಿದ್ದರು, ಯಾರನ್ನು ಸಂಪರ್ಕಿಸಿದ್ದಾರೆ ಮತ್ತಿತರ ಅನುಮಾನಾಸ್ಪದ ಚಟುವಟಿಕೆ ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಪುರಿ ಎಸ್ಪಿ ಹೇಳಿದ್ದಾರೆ. ನಾವು ವಿವಿಧ ಕೇಂದ್ರೀಯ ಸಂಸ್ಥೆಗಳು ಮತ್ತು ಹರಿಯಾಣ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಈ ಕುರಿತ ಸಮಗ್ರ ಪರಿಶೀಲನೆಯ ನಂತರ ಮಾಧ್ಯಮಗಳೊಂದಿಗೆ ವಿವರಗಳನ್ನು ಹಂಚಿಕೊಳ್ಳುತ್ತೇವೆ ಎಂದಿದ್ದಾರೆ. ಒಡಿಶಾ ಪೊಲೀಸರು ಪುರಿ ಯೂಟ್ಯೂಬರ್‌ನ ಗುರುತನ್ನು ಇನ್ನೂ ಬಹಿರಂಗಪಡಿಸಲಿಲ್ಲ.
ಇದನ್ನೂ ಓದಿ: ಭಾರತ-ಪಾಕ್ ಸಂಘರ್ಷ; ಮೋದಿ ಸರ್ಕಾರದ ಜಾಗತಿಕ ಸಂಸದರ ನಿಯೋಗವನ್ನು ಟೀಕಿಸಿದ ಸಂಜಯ್ ರಾವತ್| Delegation
ಸಂವಹನವನ್ನು ನಿರ್ವಹಿಸಲು ಅವರು ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಎನ್‌ಕ್ರಿಪ್ಟ್ ಮಾಡಿದ ಸಂದೇಶ ವೇದಿಕೆಗಳನ್ನು ಬಳಸಿದ್ದಾರೆ ಮತ್ತು ಪತ್ತೆಹಚ್ಚುವುದನ್ನು ತಪ್ಪಿಸಲು ತಮ್ಮ ಫೋನ್‌ನಲ್ಲಿ ನಕಲಿ ಹೆಸರಿನಲ್ಲಿ ಐಎಸ್‌ಐ ಸಂಪರ್ಕಗಳನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಸ್ತುತ ಅಧಿಕಾರಿಗಳು ಒಳ ಮಾಹಿತಿ ಬಗ್ಗೆ ಪರಿಶೀಲಿಸುತ್ತಿದ್ದಾರೆ.
(ಏಜೆನ್ಸೀಸ್)
ಪಕ್ಷದ ರಾಷ್ಟ್ರೀಯ ಪ್ರಧಾನ ಸಂಯೋಜಕರಾಗಿ ಸೋದರಳಿಯ ಆಕಾಶ್ ಆನಂದ್ರನ್ನು ನೇಮಿಸಿದ ಮಾಯಾವತಿ| Mayawati