ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸಬೇಕು

kasaapa
ಕಟಪಾಡಿ ಎಸ್‌ವಿಎಸ್ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು
Published on

ಪಡುಬಿದ್ರಿ: ಕನ್ನಡ ಭಾಷಾ ಸಾಹಿತ್ಯ ಹಳೆಗನ್ನಡ, ನಡುಗನ್ನಡ, ಹೊಸಗನ್ನಡ ಹೀಗೆ ಮೂರು ಹಂತಗಳಲ್ಲಿ ಸಮೃದ್ಧವಾಗಿ ಬೆಳೆದ ಭವ್ಯ ಇತಿಹಾಸ ಹೊಂದಿದೆ. ಅದನ್ನು ಉಳಿಸಿ ಬೆಳೆಸಬೇಕಾದರೆ ಮಕ್ಕಳಲ್ಲಿ ಭಾಷಾ ಸಾಹಿತ್ಯ ಓದುವ ಆಸಕ್ತಿ ಬೆಳೆಸಬೇಕು ಎಂದು ಉಡುಪಿ ಪೂರ್ಣಪ್ರಜ್ಞ ಸಂಜೆ ಕಾಲೇಜು ಉಪನ್ಯಾಸಕಿ ಪ್ರಜ್ಞಾ ಮಾರ್ಪಳ್ಳಿ ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಾಪು ತಾಲೂಕು ಘಟಕ ವತಿಯಿಂದ ಕಟಪಾಡಿ ಎಸ್‌ವಿಎಸ್ ಪ.ಪೂ. ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧಾ ವಿಜೇತರಿಗೆ ಶುಕ್ರವಾರ ಬಹುಮಾನ ವಿತರಣಾ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.

ಕಸಾಪ ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು. ಕಟಪಾಡಿ ಎಸ್‌ವಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲ ಕೆ.ಸತ್ಯೇಂದ್ರ ಪೈ ಬಹುಮಾನ ವಿತರಿಸಿದರು. ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ ಕನ್ನಡ ಭಾಷಾ ಶಿಕ್ಷಕಿ ವಿದ್ಯಾ ಅವರನ್ನು ಅಭಿನಂದಿಸಲಾಯಿತು. ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿದ್ದರು. ಉಮೇಶ್ ರಾವ್, ಕೆ.ರಾಘವೇಂದ್ರ ರಾವ್, ಎಸ್.ಎಸ್.ಪ್ರಸಾದ್. ಡೋಮಿಯನ್ ಆರ್.ನೊರೋನ್ಹಾ ಉಪಸ್ಥಿರಿದ್ದರು. ಸುಬ್ರಹ್ಮಣ್ಯ ತಂತ್ರಿ ಸ್ವಾಗತಿಸಿ, ಸಂಘಟಕ ಕೃಷ್ಣಕುಮಾರ್ ರಾವ್ ಮಟ್ಟು ನಿರೂಪಿಸಿದರು. ಅನಂತ ಮೂಡಿತ್ತಾಯ ವಂದಿಸಿದರು.

ಕನ್ನಡ ಸಾಹಿತ್ಯ ಪರಂಪರೆ ಮುಂದಿನ ಸಮಾಜಕ್ಕೆ ನೀಡುವ ಗುರುತರ ಹೊಣೆ ವಿದ್ಯಾರ್ಥಿಗಳ ಮೇಲಿದೆ. ಪರಂಪರೆ ಬಗ್ಗೆ ಪುಸ್ತಕಗಳನ್ನು ಓದುವ ಮೂಲಕ ಭವಿಷ್ಯದ ಸಾಹಿತಿಗಳಾಗಿ ಬೆಳೆಯಬೇಕು.-ಪ್ರಜ್ಞಾ ಮಾರ್ಪಳ್ಳಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net