

ಕೋಟ: ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪ್ರಯುಕ್ತ ಶಾಲಾಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಶಿಕ್ಷಣ ತರಬೇತಿ ಸಂಸ್ಥೆ ಉಡುಪಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೆೇರಿ ಆಯೋಜಿಸಿದ ಸಾಕ್ಷರತಾ ಮಹತ್ವ, ನನ್ನ ಜೀವನದಲ್ಲಿ ಗಾಂಧಿ ತತ್ವ ಅಳವಡಿಸಿಕೊಳ್ಳುವ ಕುರಿತು ನಡೆದ ತಾಲೂಕುಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕೋಟ ಮಣೂರು ಸರ್ಕಾರಿ ಸಂಯುಕ್ತ ಪ್ರೌಢಶಾಲೆ ವಿದ್ಯಾರ್ಥಿನಿ ಮೈತ್ರಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಮುಖ್ಯ ಶಿಕ್ಷಕ, ಅಧ್ಯಾಪಕ ವೃಂದ, ಅಧ್ಯಕ್ಷರು, ಸದಸ್ಯರು, ಮೇಲುಸ್ತುವಾರಿ ಸಮಿತಿ ಅಭಿನಂದನೆ ಸಲ್ಲಿಸಿದ್ದಾರೆ.