More

    ಎನ್‌ಎಸ್‌ಯುಐನಿಂದ ಕಾಲೇಜ್‌ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

    ಕಾರವಾರ:ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ(ಎನ್‌ಎಸ್‌ಯುಐ) ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ವಿಶ್ವ ಗೌಡ ತಿಳಿಸಿದರು.
    ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು,ವ್ಯಸನ ಮುಕ್ತ ಭಾರತ’ ಎಂಬ ವಿಷಯದ ಮೇಲೆ ಸ್ಪರ್ಧೆ ನಡೆಯಲಿದ್ದು, ಪಿಯುದಿಂದ ಸ್ನಾತಕೋತ್ತರ ಪದವಿವರೆಗೆ ಅಲ್ಲದೆ, ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳೂ ಇದರಲ್ಲಿ ಭಾಗವಹಿಸಬಹುದು.
    ಕನ್ನಡ ಮಾಧ್ಯಮದಲ್ಲಿ ನಡೆಯುವ ಸ್ಪರ್ಧೆಗಳಿಗೆ 6 ಕ್ಷೇತ್ರಗಳಿಗೆ ಪ್ರತ್ಯೇಕವಾಗಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ನೀಡಲಾಗುವುದು. ಇಂಗ್ಲಿಷ್ ಮಾಧ್ಯಮದಲ್ಲಿ ಬರೆದ ಪ್ರಬಂಧಗಳನ್ನು ಜಿಲ್ಲಾ ಮಟ್ಟಕ್ಕೆ ಮಾತ್ರ ಪರಿಗಣಿಸಿ ಅಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಗುವುದು ಎಂದರು.

    ಇದನ್ನೂ ಓದಿ:ಜಾತಿ-ಧರ್ಮದ ಹೆಸರಲ್ಲಿ ಸಂಘರ್ಷ ದೇವರಿಗೆ ಮಾಡುವ ಅವಮಾನ: ಹೀಗೆ ಹೇಳಿದ್ದು ಯಾರು ಗೊತ್ತಾ?

    ಕ್ಷೇತ್ರ ಹಂತದಲ್ಲಿ ಮೊದಲ ಸ್ಥಾನ ಪಡೆದವರಿಗೆ ತಲಾ 4 ಸಾವಿರ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ತಲಾ 2 ಸಾವಿರ ರೂ. , ಜಿಲ್ಲಾ ಮಟ್ಟದಲ್ಲಿ ಮೊದಲ ಸ್ಥಾನ ಪಡೆದವರಿಗೆ ಮೊಬೈಲ್ ಫೋನ್, ದ್ವಿತೀಯ ಸ್ಥಾನ ಪಡೆದವರಿಗೆ ಸ್ಮಾರ್ಟ್ ವಾಚ್ ನೀಡಲಾಗುವುದು ಎಂದರು.

    ಪ್ರಬಂಧವನ್ನು ಕೈಬರಹ ಅಥವಾ ಮುದ್ರಿಸಿದ ಹಾಳೆಯಲ್ಲೂ ಕಳಿಸಬಹುದು, 200 ಪದಗಳಿಗೆ ಮೀರಬಾರದು. ಸೆ. 30 ರ ಒಳಗೆ ಜಿಲ್ಲಾ ಕಾಂಗ್ರೆಸ್ ಕಚೇರಿ, ಇಂದಿರಾ ನಗರ, ಶಿರಸಿ ಇಲ್ಲಿಗೆ ಪ್ರಬಂಧ ತಲುಪಿಸಬಹೇಕು.

    ಪ್ರಬಂಧದ ಜತೆ ಕಾಲೇಜ್‌ಗಳ ಗುರುತಿನ ಚೀಟಿಯ ಪ್ರತಿ ಕಳಿಸಬೇಕು ಎಂದರು. ಯೂತ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಸಂಚಾಲಕ ಸಯ್ಯದ್ ಅಶ್ರಫ್, ಸೇವಾ ದಳ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸಂಯೋಜಕ ಸೂರಜ್ ನಾಯ್ಕ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts