More

    ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಆಗ್ರಹ: ಯಲಬುರ್ಗಾದಲ್ಲಿ ಸರ್ಕಾರದ ವಿರುದ್ಧ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

    ಯಲಬುರ್ಗಾ: ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಿ ನಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

    ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಉಪಾಧ್ಯಕ್ಷ ಸುಧೀರ ಕೊರ್ಲಹಳ್ಳಿ ಮಾತನಾಡಿ, ದೇಶದಲ್ಲಿ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಡುಗೆ ಎಣ್ಣೆ ಸೇರಿ ಅಗತ್ಯ ದಿನಸಿ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ. ಸಾರ್ವಜನಿಕರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು. ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಆದರೂ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿರುವುದು ನೋವಿನ ಸಂಗತಿ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಜನರ ಬದುಕು ಅತಂತ್ರವಾಗಿದೆ. ಕೂಡಲೇ ಬೆಲೆ ಏರಿಕೆ ಇಳಿಸಬೇಕು ಎಂದು ಆಗ್ರಹಿಸಿದರು. ಪಪಂ ಸದಸ್ಯೆ ನಂದಿತಾ ದಾನರಡ್ಡಿ ಮಾತನಾಡಿದರು. ಪ್ರಮುಖರಾದ ಶರಣಪ್ಪ ಗಾಂಜಿ, ಶಿವನಗೌಡ ದಾನರಡ್ಡಿ, ಸಂಗಪ್ಪ ಕೊಪ್ಪಳ, ಮಲ್ಲಿಕಾರ್ಜುನ ಜಕ್ಕಲಿ, ಯಲ್ಲಪ್ಪ ನಾಯಕ್, ಹನುಮಂತ ಭಜಂತ್ರಿ, ರೆಹಮಾನ್‌ಸಾಬ್ ನಾಯಕ್, ಹುಲುಗಪ್ಪ ಬಂಡಿವ್ಡರ್, ಸುರೇಶ ದಾನಕೈ, ಅಬ್ದುಲ್ ಕವಲೂರು, ಖಾಜಾವಲಿ ಗಡಾದ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts