More

    ಸುಸೂತ್ರವಾಗಿ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ

    ರಾಯಚೂರು: ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಜರುಗಿದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆಗಳು ಸುಸೂತ್ರವಾಗಿ ಜರುಗಿದ್ದು, ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದ 31,099 ವಿದ್ಯಾರ್ಥಿಗಳಲ್ಲಿ 30,228 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 871 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
    ರಾಯಚೂರು ತಾಲೂಕಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ 8,244 ವಿದ್ಯಾರ್ಥಿಗಳಲ್ಲಿ 300 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ದೇವದುರ್ಗ ತಾಲೂಕಿನಲ್ಲಿ ನೋಂದಣಿ ಮಾಡಿಸಕೊಂಡಿದ್ದ 4,261 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
    ಲಿಂಗಸುಗೂರು ತಾಲೂಕಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ 6,394 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಗೈರಾಗಿದ್ದು, ಮಾನ್ವಿ ತಾಲೂಕಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ 5,752 ವಿದ್ಯಾರ್ಥಿಗಳಲ್ಲಿ 184 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
    ಸಿಂಧನೂರು ತಾಲೂಕಿನಲ್ಲಿ ನೋಂದಣಿ ಮಾಡಿಸಕೊಂಡಿದ್ದ 5,747 ವಿದ್ಯಾರ್ಥಿಗಳಲ್ಲಿ 159 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪರೀಕ್ಷೆಯಲ್ಲಿ ಯಾವುದೇ ನಕಲು ಪ್ರಕರಣಗಳು ಜರುಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts