More

    ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿಗೆ ಅಳವಡಿಸಿದ್ದ ಸಿಸಿ ಕ್ಯಾಮರಾ ಕಳ್ಳತನ

    ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಶಾಲಾ ಕೊಠಡಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳನ್ನು ಯಾರೋ ದೋಚಿಕೊಂಡು ಹೋದ ಘಟನೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
    ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾ ಕಳ್ಳತನ ಮಾಡಿರುವುದು.
    ಶಾಲೆಯ 7 ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಆದರೆ, ಯಾರೋ ಕಳ್ಳರು ಕ್ಯಾಮರಾಕ್ಕೆ ಅಳವಡಿಸಿದ್ದ ಕೇಬಲ್‌ಅನ್ನು ಕಟ್ ಮಾಡಿ 10 ಸಾವಿರ ರೂ. ಮೌಲ್ಯದ ಸಿಸಿ ಕ್ಯಾಮರಾ ದೋಚಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts