More

    ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಿ

    ಹನೂರು: ಓದಿನ ಕಡೆಗೆ ಹೆಚ್ಚಿನ ಒತ್ತು ನೀಡಿ ಉತ್ತಮ ಅಂಕ ಗಳಿಸಿ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


    ಪಟ್ಟಣದ ಬಿಆರ್‌ಸಿ ಸಭಾಂಗಣದಲ್ಲಿ ಮಂಗಳವಾರ ಪರೀಕ್ಷಾ ತಯಾರಿ ಸಂಬಂಧ ಎಸ್ಸೆಸ್ಸೆಲ್ಸಿ ಅಂಗವಿಕಲ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯ ಜೀವನದಲ್ಲಿ ಪ್ರಮುಖ ಘಟ್ಟ. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದರಿಂದ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ. ಈ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ವಿಷಯವಾರು ವೇಳಾಪಟ್ಟಿ ತಯಾರಿಸಿಕೊಂಡು ಓದಿನ ಕಡೆಗೆ ಹೆಚ್ಚಿನ ಒತ್ತು ನೀಡಬೇಕು. ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳುವುದರ ಪರೀಕ್ಷೆಗೆ ಸಜ್ಜಾಗಬೇಕು. ಸಮಸ್ಯೆಗಳಿದ್ದರೆ ಆಯಾ ಶಿಕ್ಷಕರಿಂದ ಪರಿಹಾರ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಭಯ ಬೇಡ. ಈ ಬಗ್ಗೆ ಶಿಕ್ಷಕರು ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.


    ಬಳಿಕ ವಿಷಯವಾರು ಸಂಪನ್ಮೂಲ ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು. ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಸಂಪನ್ಮೂಲ ಶಿಕ್ಷಕರಾದ ಚಂದ್ರಶೇಖರ, ರವೀಂದ್ರ, ವೇಣುಗೋಪಾಲ್, ಕೃಷ್ಣ ಹಾಗೂ ಮಾರ್ಗದರ್ಶಿ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts