More

    ಮೌಢ್ಯಮುಕ್ತ ವೈಜ್ಞಾನಿಕ ಅಕಾಡೆಮಿ ಸ್ಥಾಪಿಸಿ

    ಶಿವಮೊಗ್ಗ: ರಾಜ್ಯ ಸರ್ಕಾರ ಮೌಢ್ಯಮುಕ್ತ ವೈಜ್ಞಾನಿಕ ಅಕಾಡೆಮಿಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಪ್ರಮುಖರು ಬುಧವಾರ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

    ಸಾರ್ವಜನಿಕರಲ್ಲಿ ಇತ್ತೀಚೆಗೆ ಮೌಢ್ಯ ಹೆಚ್ಚುತ್ತಿದ್ದು ಇದನ್ನು ತಡೆಯಬೇಕಾಗಿದೆ. ಮುಖ್ಯವಾಗಿ ಮಕ್ಕಳು, ಜನಸಾಮಾನ್ಯರಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಬೇಕಾಗಿದೆ. ಇದರ ಜತೆಗೆ ಮಾನವೀಯ ಮೌಲ್ಯ, ಚಿಂತನಾಶೀಲ ಗುಣ, ಸದೃಢ ಮನಸ್ಸು ರೂಪಿಸಲು ಅನುಕೂಲವಾಗುವಂತೆ ರಾಜ್ಯ ಮಟ್ಟದಲ್ಲಿ ವೈಜ್ಞಾನಿಕ ಅಕಾಡೆಮಿ ಸ್ಥಾಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು.
    ವೈಜ್ಞಾನಿಕ ಸಂಶೋಧನಾ ಪರಿಷತ್ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಪ್ರತಿವರ್ಷ ವೈಜ್ಞಾನಿಕ ಸಮ್ಮೇಳನ ಆಯೋಜಿಸುತ್ತಿದ್ದು, ಕೆಲವು ಕಡೆ ವಿಜ್ಞಾನ ಗ್ರಾಮ ಕಾರ್ಯಕ್ರಮ ಯಶಸ್ವಿಯಾಗಿದೆ. ಇದರ ಮುಂದುವರಿದ ಭಾಗವಾಗಿ ಮೌಢ್ಯಮುಕ್ತ ನಿವಾರಣೆಗೆಂದು ವೈಜ್ಞಾನಿಕ ಅಕಾಡೆಮಿ ಸ್ಥಾಪಿಸಬೇಕೆಂದು ಒತ್ತಾಯಿಸಿದರು.
    ಮನವಿ ಸಲ್ಲಿಕೆ ವೇಳೆ ಪರಿಷತ್ ಜಿಲ್ಲಾಧ್ಯಕ್ಷ ಬಿ.ಡಿ.ರವಿ, ಸಿ.ಮೂರ್ತಿ, ಜಯಪ್ಪ ಹೆಬ್ಬಳಗೆರೆ, ಅಶೋಕ್‌ಕುಮಾರ್, ಜ್ಯೋತಿ ಮಣೂರು, ಅಮಿತ್, ವೆಂಕಟೇಶ್ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts