More

    ಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ; ವಿಶ್ವ ಕುಂಚಿಟಿಗರ ಪರಿಷತ್ ಕಾರ್ಯಕ್ರಮದಲ್ಲಿ ಒತ್ತಾಯ ; ಕೇಂದ್ರದ ಒಬಿಸಿ ಪಟ್ಟಿಗೂ ಸೇರಿಸಿ

    ತುಮಕೂರು: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ , ರಾಜಕೀಯವಾಗಿ ಹಿಂದುಳಿದ ಕುಂಚಿಟಿಗ ಸಮುದಾಯ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು ಮತ್ತು ಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಮಧುಗಿರಿ ಶಾಸಕ ಎಂ.ವಿ.ವೀರಭದ್ರಯ್ಯ ಒತ್ತಾಯಿಸಿದರು.

    ನಗರದ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದ ಸಭಾಂಗಣದಲ್ಲಿ ವಿಶ್ವ ಕುಂಚಿಟಿಗರ ಪರಿಷತ್ ಶನಿವಾರ ಏರ್ಪಡಿಸಿದ್ದ ‘ಕುಂಚಿಟಿಗ ಹೊಸತನದ ಹುಡುಕಾಟ’ ಪುಸ್ತಕ, ನೂತನ ಕ್ಯಾಲೆಂಡರ್ ಬಿಡುಗಡೆ, ಕುಂಚಿಟಿಗ ರತ್ನ, ಕುಂಚಶ್ರೀ, ಕುಂಚಿಟಿಗ ಶಿರೋಮಣಿ, ಸಮಾಜ ಸೇವಾರತ್ನ, ಕುಂಚಿಟಿಗ ಆದರ್ಶ ದಂಪತಿ ಪ್ರಶಸ್ತಿ ಪ್ರದಾನ ಹಾಗೂ ಕುಂಚಿಟಿಗ ಶಾಸಕರಿಗೆ ಮತ್ತು ನಿಗಮ, ಮಂಡಳಿ ಅಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

    ಸಮುದಾಯದ ಜನಪ್ರತಿನಿಧಿಗಳು, ಮುಖಂಡರು ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕಿದ್ದು ಪಕ್ಷಾತೀತವಾದ ಹೋರಾಟಕ್ಕೆ ನಾನು ಸಿದ್ಧ ಎಂದರು.
    ಮೀಸಲಾತಿ ಇಲ್ಲದಿರುವುದರಿಂದ ಸಮುದಾಯದ ವಿದ್ಯಾರ್ಥಿಗಳು ಐಎಎಸ್, ಐಪಿಎಸ್‌ನಂತಹ ಉನ್ನತ ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ, ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೊಂಡರೆ ಉನ್ನತ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯಪಟ್ಟರು.
    ಈಗಾಗಲೇ ಕುಂಚಿಟಿಗ ಜನಾಂಗದ ಬಗ್ಗೆ ಕುಲಶಾಸ್ತ್ರದ ಅಧ್ಯಯನವೂ ನಡೆದಿದೆ, ಇದನ್ನು ಕ್ಯಾಬಿನೆಟ್‌ನಲ್ಲಿ ಮಂಡಿಸಿ ಆದಷ್ಟು ಬೇಗ ಆದೇಶ ಹೊರಡಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ವೀರಭದ್ರಯ್ಯ, ರಾಜ್ಯ ಸರ್ಕಾರ ಕುಂಚಿಟಿಗರ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಮನವಿ ಮಾಡಿದರು.

    ಶಿರಾ ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ಕಾಂಗ್ರೆಸ್ ಮುಖಂಡ ಮುರಳೀಧರ ಹಾಲಪ್ಪ, ಆಂಧ್ರಪ್ರದೇಶದ ಮಾಜಿ ಸಚಿವ ನರಸೇಗೌಡ, ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್, ನಿವೃತ್ತ ಅಧಿಕಾರಿ ತಿಪ್ಪೇಸ್ವಾಮಿ ಮಾತನಾಡಿದರು.

    ವಿಶ್ವ ಕುಂಚಿಟಿಗರ ಪರಿಷತ್ ಕಾರ್ಯಾಧ್ಯಕ್ಷ ಎಸ್.ಪುಟ್ಟೀರಪ್ಪ, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಅಧ್ಯಕ್ಷ ಎಸ್.ಲಿಂಗಮೂರ್ತಿ, ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ, ಡಾ.ಬಿ.ನಳಿನಿ ರಂಗೇಗೌಡ, ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ದೊಡ್ಡಲಿಂಗಪ್ಪ, ಕಾರ್ಯಾಧ್ಯಕ್ಷ ಆರ್.ಕಾಮರಾಜು, ಡಾ.ಟಿ.ಕೆ.ಕೃಷ್ಣಮೂರ್ತಿ, ಡಾ.ವಿ.ಆಂಜಿನಪ್ಪ, ರವೀಂದ್ರ ಇದ್ದರು.

    ಕುಂಚಿಟಿಗ ಸಮುದಾಯಾದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯವಿದ್ದು ಸಮುದಾಯದ ಎಲ್ಲರಿಗೂ ಉನ್ನತ ಶಿಕ್ಷಣ ಸಿಗುವಂತಾಗಬೇಕು, ಕೇಂದ್ರ ಸರ್ಕಾರದ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಸಮುದಾಯಮ ವಿದ್ಯಾರ್ಥಿಗಳಿಗೆ ಮೀಸಲಾತಿಯ ಲಾಭ ಸಿಗುವಂತಾಗಲು ಕೇಂದ್ರಕ್ಕೆ ಮನವಿ ಮಾಡಲು ಪಕ್ಷಾತೀತ ನಿಯೋಗ ತೆರಳೊಣ, ಅಭಿವೃದ್ಧಿ ನಿಗಮ ಸ್ಥಾಪನೆಗೂ ಸಿಎಂಗೆ ಮನವಿ ಮಾಡೋಣ.
    ಡಾ.ರಾಜೇಶ್‌ಗೌಡ ಶಿರಾ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts