More

    ರಾಜ್ಯದ 40 ಕೋವಿಡ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕ ಸ್ಥಾಪನೆ

    ಹಾನಗಲ್ಲ: ರಾಜ್ಯದ 40 ಕೋವಿಡ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಆ ಪೈಕಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಮತ್ತು ಹಾನಗಲ್ಲ ಆಸ್ಪತ್ರೆಗಳಲ್ಲಿ ಘಟಕಗಳ ಕಾಮಗಾರಿ ಆರಂಭಿಸಲಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.
    ಹಾನಗಲ್ಲಿನಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಬುಧವಾರ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
    ಹಾವೇರಿ ಮತ್ತು ರಾಣೆಬೆನ್ನೂರಿನಲ್ಲಿ ನಿಮಿಷಕ್ಕೆ ಸಾವಿರ ಲೀಟರ್ ಆಕ್ಸಿಜನ್ ಉತ್ಪಾದಿಸುವ 2 ಘಟಕಗಳನ್ನು ಕೇಂದ್ರ, ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಆರಂಭಿಸಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ ನಿಮಿಷಕ್ಕೆ 3000 ಲೀಟರ್ ಆಕ್ಸಿಜನ್ ಉತ್ಪಾದಿಸುವ ಘಟಕ ನಿರ್ವಣಕ್ಕೆ ಹಣ ಬಿಡುಗಡೆಗೊಳಿಸಿದ್ದು, ಮುಂದಿನ ತಿಂಗಳಲ್ಲಿ ಕಾರ್ಯಾರಂಭವಾಗಲಿದೆ. ಹಾನಗಲ್ಲ ಆಸ್ಪತ್ರೆಯಲ್ಲಿ 44 ಆಕ್ಸಿಜನ್ ಪೂರೈಕೆಯಿರುವ ಬೆಡ್​ಗಳ ವ್ಯವಸ್ಥೆಯಿದೆ. ರೋಗಿಗಳ ರೊಟೇಶನ್ ವ್ಯವಸ್ಥೆಗಾಗಿ ಇನ್ನೂ 20 ಹಾಸಿಗೆಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಲಕೇರಿ ಗ್ರಾಮದಲ್ಲಿ 100 ಬೆಡ್​ಗಳ, ಅಕ್ಕಿಆಲೂರಿನ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಅಕ್ಕಿಆಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಂಪರ್ಕವಿರುವ 30 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
    ತಾಲೂಕಿನ ಕೋವಿಡ್ ಆಸ್ಪತ್ರೆಗಳಿಗೆ ಅಗತ್ಯವಿರುವ ಸಾಮಗ್ರಿ, ಸಿಬ್ಬಂದಿ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.

    ಕೋವಿಡ್ ಸಂದರ್ಭದಲ್ಲಿ ಯಾರೂ ರಾಜಕಾರಣ, ದೋಷಾರೋಪ ಮಾಡುವುದು ಬೇಡ. ಜನರ ಪ್ರಾಣ ಉಳಿಸಲು ಸಾರ್ವತ್ರಿಕ ಪ್ರಯತ್ನದ ಅಗತ್ಯವಿದೆ. ಸೋಂಕು ಹರಡದಂತೆ ಈ ಸವಾಲನ್ನು ಎದುರಿಸಲು ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಬೇಕು. ಹಾನಗಲ್ಲ ತಾಲೂಕಿಗೆ 25 ಆಕ್ಸಿಜನ್ ಕಾನ್ಸನ್​ಟ್ರೇಟರ್ ಯಂತ್ರಗಳನ್ನು ತಕ್ಷಣ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಲಸಿಕೆ ಪಡೆದವರಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ತೀರಾ ಕಡಿಮೆಯಿದೆ. ತೀವ್ರ ಉಸಿರಾಟದಿಂದ ಮೃತಪಟ್ಟವರು ಹೆಚ್ಚು ಇದ್ದಾರೆ.
    | ಶಿವಕುಮಾರ ಉದಾಸಿ, ಸಂಸದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts