ಕಾರ್ಮಿಕರ ಹಿತಕಾಯಲು ಮಂಡಳಿ ಸ್ಥಾಪನೆ

ಎನ್.ಆರ್.ಪುರ: ಕಟ್ಟಡ ಕಾರ್ಮಿಕರ ಒಳಿತಿಗಾಗಿ 2007ರಲ್ಲಿ ಅಂದಿನ ಕಾರ್ಮಿಕ ಸಚಿವ ಆಸ್ಕರ್‌ಫನಾರ್ಂಡಿಸ್ ಕಾರ್ಮಿಕ ಮಂಡಳಿ ಸ್ಥಾಪಿಸಿದ್ದರು ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಶಾಸಕರ ಕಚೇರಿಯಲ್ಲಿ ಕಾರ್ಮಿಕ ಇಲಾಖೆಯಿಂದ ನೋಂದಾಯಿತ 178 ಫಲಾನುಭವಿಗಳಿಗೆ ಗಾರೆ ಪರಿಕರಣ ಕಿಟ್,15 ಜನರಿಗೆ ವೆಲ್ಡಿಂಗ್ ಕಿಟ್, 250 ಜನರಿಗೆ ಪೋಷಕಾಂಶಗಳ ಕಿಟ್ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ 15ಜನ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದರು.
ಕಟ್ಟಡ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ಅಸಂಘಟಿತ ವರ್ಗಕ್ಕೆ ಸೇರಿದವರಾಗಿದ್ದಾರೆ. ಅವರು ಕಡು ಬಡವರಾಗಿದ್ದು, ಕಟ್ಟಡದ ಮೇಲೆ ಕೆಲಸ ಮಾಡುವುದು ಅಪಾಯಕಾರಿಯಾಗಿದ್ದು, ಅವರಿಗಾಗಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲಾಯಿತು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಹಲವಾರು ಸೌಲಭ್ಯಗಳನ್ನು ನೀಡಲಾಗಿದೆ.
ಪಪಂ ಅಧ್ಯಕ್ಷೆ ಸುರೈಯಾಭಾನು, ಉಪಾಧ್ಯಕ್ಷೆ ಉಮಾಕೇಶವ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ, ಸದಸ್ಯರಾದ ಜುಬೇದ, ಮುನಾವರ್ ಪಾಷಾ, ಮುಕಂದ, ವಸೀಂ, ಕುಮಾರಸ್ವಾಮಿ, ತಹಸೀಲ್ದಾರ್ ತನುಜ ಸವದತ್ತಿ, ಕಾರ್ಮಿಕ ಇಲಾಖೆ ಹಿರಿಯ ಕಾರ್ಮಿಕ ನಿರೀಕ್ಷಕ ಜೀವನ್‌ಕುಮಾರ್, ತಾಪಂ ಇಒ ನವೀನ್ ಕುಮಾರ್, ಕೆಪಿಸಿಸಿ ಸದಸ್ಯ ಆರ್.ಸದಾಶಿವ, ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲು ನಟರಾಜ, ನಗರ ಘಟಕದ ಅಧ್ಯಕ್ಷ ಬಿಳಾಲು ಮನೆ ಉಪೇಂದ್ರ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನೀಲ್ ಇದ್ದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…