ಜಿಲ್ಲೆಯಲ್ಲಿ 10 ಸಖಿ ಮತಗಟ್ಟೆಗಳ ಸ್ಥಾಪನೆ

ಮಡಿಕೇರಿ: ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 10 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷೆ ಕೆ.ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ.

ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮಡಿಕೇರಿ ಸಂತ ಮೈಕಲರ ಶಾಲೆ, ಬ್ಲಾಸಂ ಪ್ರೌಢಶಾಲೆ, ಸುಂಟಿಕೊಪ್ಪ ಸಂತ ಆಂಥೋನಿ ಹಿರಿಯ ಪ್ರಾಥಮಿಕ ಶಾಲೆ, ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆ, ಪಂಜರಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ, ತೆಲುಗರ ಬೀದಿ ಸಮುದಾಯ ಭವನ, ಬಿಟ್ಟಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಂಕದಕಟ್ಟೆ ಸಮುದಾಯ ಭವನ ಮತಗಟ್ಟೆಗಳನ್ನು ಸಖಿ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ಮಾಲಂಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚೆನ್ನಂಗಿ ಬಸವನಹಳ್ಳಿ ಗಿರಿಜನ ಆಶ್ರಮ ಶಾಲೆ, ನಾಗರಹೊಳೆ ಸರ್ಕಾರಿ ಆಶ್ರಮ ಶಾಲೆ, ಹೆಬ್ಬಾಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಗಳನ್ನು ಸಾಂಪ್ರದಾಯಿಕ ಮತಗಟ್ಟೆಗಳೆಂದು, ತಾಲೂಕು ಪಂಚಾಯಿತಿ ಕಚೇರಿಯ ಮತಗಟ್ಟೆಯನ್ನು ಅಂಗವಿಕಲರ ಮತಗಟ್ಟೆ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *