More

    ಮೌಲ್ಯಾಂಕನ: ಶಿಕ್ಷಕರ ಹೊರೆ ಕಡಿತಗೊಳಿಸಿದ ಪರೀಕ್ಷಾ ಮಂಡಳಿ

    ಬೆಂಗಳೂರು 5,8ಮತ್ತು 8ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ಉತ್ತರ ಪತ್ರಿಕೆಗಳ ಅವೈಜ್ಞಾನಿಕ ಮೌಲ್ಯಮಾಪನಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರತಿದಿನ ಶಿಕ್ಷಕರು ಮಾಡಬೇಕಾದ ಉತ್ತರ ಪತ್ರಿಕೆಗಳ ಸಂಖ್ಯೆಯನ್ನು ಕಡಿತಗೊಳಿಸಿದೆ.

    ಪ್ರತಿ ಶಿಕ್ಷಕರು ದಿನವೊಂದರಲ್ಲಿ 5ನೇ ತರಗತಿಯ 80, 8ನೇ ತರಗತಿಯ 60 ಮತ್ತು 9ನೇ ತರಗತಿಯ 40 ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಬೇಕೆಂದು ಸೂಚಿಸಿತ್ತು. ಅದನ್ನು ಪರಿಷ್ಕರಣೆ ಮಾಡಿರುವ ಮಂಡಳಿಯು 8ನೇ ತರಗತಿಯ 50 ಮತ್ತು 9ನೇ ತರಗತಿಯ 30 ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

    ಮುಂದಿನ ದಿನಗಳಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1ರ ಕೊಠಡಿ ಮೇಲ್ವಿಚಾರಣಾ ಕಾರ್ಯ ಹಾಗೂ ಚುನಾವಣೆ ಕಾರ್ಯಗಳನ್ನು ನಿರ್ವಹಿಸಬೇಕಿರುವುದರಿಂದ ಯಾವುದೇ ವಿಳಂಬಕ್ಕೆ ಆಸ್ಪದ ನೀಡದಂತೆ ನಿಗದಿತ ಕಾಲಾವಧಿಯಲ್ಲಿಯೇ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಬೇಕು. ಈ ಸಂಬಂಧ ಡಿಡಿಪಿಐ ಮತ್ತು ಬಿಇಒ ಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮಂಡಳಿ ಅಧ್ಯಕ್ಷರು ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts